Cyclone Dana – ಸರಪಳಿ ಬಳಸಿ ರೈಲನ್ನು ಕಟ್ಟಿದ ಅಧಿಕಾರಿಗಳು

Public TV
2 Min Read

ಕೋಲ್ಕತ್ತಾ: ಡಾನಾ ಚಂಡಮಾರುತದಿಂದ (Cyclone Dana) ಈಗ ಪಶ್ಚಿಮ ಬಂಗಾಳ (West Bengal) ಮತ್ತು ಒಡಿಶಾದಲ್ಲಿ (Odisha) ಬಲವಾದ ಗಾಳಿ ಬೀಸುತ್ತಿದೆ. ಬಲವಾಗಿ ಬೀಸುತ್ತಿರುವ ಗಾಳಿಯಿಂದ  ರೈಲುಗಳು ಹಳಿಯಿಂದ ಜಾರದಂತೆ ಸರಪಳಿ ಮತ್ತು ಬೀಗಗಳ ಸಹಾಯದಿಂದ ರೈಲನ್ನು ಹಳಿಗೆ ಕಟ್ಟಲಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಪಶ್ಚಿಮ ಬಂಗಾಳದ ಶಾಲಿಮಾರ್‌ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ರೈಲನ್ನು ಹಳಿಗೆ ಕಟ್ಟುತ್ತಿರುವ ವಿಡಿಯೋ ಲಭ್ಯವಾಗಿದೆ.

ಕಟ್ಟಿದ್ದು  ಯಾಕೆ?
ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಷ್ಟೊಂದು ವೇಗದಲ್ಲಿ ಗಾಳಿ ಬೀಸುವುದರಿಂದ ಬೋಗಿಗಳು ವಾಲುವ ಸಾಧ್ಯತೆ ಜಾಸ್ತಿ ಇರುತ್ತದೆ. ಜಾಸ್ತಿ ವಾಲಿದಾಗ ಚಕ್ರಗಳು ಸರಿದು ಪಲ್ಟಿಯಾಗುತ್ತದೆ. ಈ ರೀತಿ ಆಗದೇ ಇರಲು ಚಂಡಮಾರುತದ ಸಂರ್ಭದಲ್ಲಿ ರೈಲನ್ನು ಹಳಿಗೆ ಕಟ್ಟಲಾಗುತ್ತದೆ.

ಡಾನಾ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 300ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ (Express Trains) ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ (Indian Railways) ರದ್ದುಗೊಳಿಸಿದೆ. ಇದನ್ನೂ ಓದಿ: Dana Cyclone | ಒಡಿಶಾ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ 10 ಲಕ್ಷ ಜನರ ಸ್ಥಳಾಂತರ

ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 23 ಮತ್ತು ಅಕ್ಟೋಬರ್ 25 ರ ನಡುವೆ ಸಂಚರಿಸುವ ರೈಲುಗಳನ್ನು ರದ್ದುಗೊಳಿಸುವುದಾಗಿ ಆಗ್ನೇಯ ರೈಲ್ವೆ ವಲಯದ (SER) ಪ್ರಕಟಿಸಿದೆ.

ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋದರೆ ಆಗ್ನೇಯ ರೈಲ್ವೆ ವಲಯದ ಮತ್ತಷ್ಟು ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ಪೂರ್ವ ರೈಲ್ವೆ ಅಕ್ಟೋಬರ್ 24 ರಿಂದ 25 ರವರೆಗೆ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ (Bay of engal) ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.

ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಪುರಿ ಮತ್ತು ಸಾಗರ್ ದ್ವೀಪದ ನಡುವೆ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ.

 

Share This Article