ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ: ಡಿ.ಕೆ.ಶಿವಕುಮಾರ್

Public TV
1 Min Read

– ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಶೀಘ್ರವೇ ಕ್ರಮ

ಮಂಗಳೂರು: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D K Shivakumar) ಘೋಷಿಸಿದ್ದಾರೆ.

ಶನಿವಾರ ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು (Kambala) ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಡ್ರಾಮಾ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು. ಜನಪದ ಸಂಸ್ಕೃತಿ ಉಳಿಸಲು ಸರ್ಕಾರ ಸದಾ ನೆರವು ನೀಡಲಿದೆ ಎಂದರು. ಇದನ್ನೂ ಓದಿ: ಕರಗ ಶಕ್ತೋತ್ಸವಕ್ಕೆ ರಾತ್ರಿ 12:30ಕ್ಕೆ ಚಾಲನೆ, ಸಿಎಂ-ಡಿಸಿಎಂ ಬರ್ತಾರೆ: ರಾಮಲಿಂಗಾರೆಡ್ಡಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಶ್ರೀಮಂತವಾಗಿದೆ. ಧಾರ್ಮಿಕವಾಗಿ ಹಲವಾರು ಪುಣ್ಯಕ್ಷೇತ್ರಗಳಿವೆ. ಅತಿ ಹೆಚ್ಚು ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳು ಇವೆ. ಇದಕ್ಕೆ ಪೂರಕವಾಗಿ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಶೀಘ್ರವೇ ಪ್ರವಾಸೋದ್ಯಮ ಸಚಿವರೊಂದಿಗೆ ಇಲ್ಲಿಗೆ ಬಂದು ಹೊಸ ಕಾಯ9ಕ್ರಮ, ನೀತಿ ರೂಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಗೋಲ್ಡ್ ಪ್ರಿಯರಿಗೆ ಶಾಕ್‌ – ಚಿನ್ನದ ಬೆಲೆ ಒಂದೇ ದಿನ 6,000 ರೂ. ಏರಿಕೆ

ಕಾರ್ಯಕ್ರಮದಲ್ಲಿ ಶಾಸಕರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ ಸೇರಿ ಹಲವರು ಭಾಗಿಯಾಗಿದ್ದರು.

Share This Article