ಡಾಲಿ ಬರ್ತ್‌ಡೇ ಪಾರ್ಟಿಯಲ್ಲಿ‌ ಮಿಂಚಿದ ಸ್ಯಾಂಡಲ್‌ವುಡ್‌ ಸ್ಟಾರ್ಸ್

Public TV
1 Min Read

ಟ ರಾಕ್ಷಸ ಡಾಲಿ (Daali Dhananjay) ಆಗಸ್ಟ್ 23ರಂದು ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದರು. ಇದೀಗ ಚಿತ್ರರಂಗದ ಸ್ನೇಹಿತರಿಗಾಗಿ ಗ್ರ್ಯಾಂಡ್ ಆಗಿ ಬರ್ತ್‌ಡೇ (Birthday) ಸೆಲೆಬ್ರೇಟ್ ಮಾಡಿದ್ದಾರೆ. ಚಂದನವನದ ನಟ-ನಟಿಯರು ಡಾಲಿ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಾರೆ.

ಬರ್ತ್‌ಡೇ ಪಾರ್ಟಿಯಲ್ಲಿ ಕೆಜಿಎಫ್ (KGF) ಹೀರೋ ಯಶ್(Yash), ಅಭಿಷೇಕ್ ಅಂಬರೀಶ್, ಮಿಲನಾ-ಡಾರ್ಲಿಂಗ್ ಕೃಷ್ಣ, ಮೇಘನಾ ರಾಜ್, ಪನ್ನಗಭರಣ, ಕೃಷಿ ತಾಪಂಡ, ಲವ್ಲಿ ಸ್ಟಾರ್ ಪ್ರೇಮ್ ಕುಟುಂಬ, ಅಮೃತಾ ಅಯ್ಯಂಗಾರ್, ನಿರೂಪ್ ಭಂಡಾರಿ, ದಿಗಂತ್-ಐಂದ್ರಿತಾ ಜೋಡಿ, ಸಪ್ತಮಿ ಗೌಡ, ವಾಸುಕಿ ವೈಭವ್, ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿ ನಟ ಡಾಲಿಗೆ ವಿಶ್ ಮಾಡಿದ್ದರು. ಇದನ್ನೂ ಓದಿ:ಕುಟುಂಬದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನಿಖಿಲ್

ಕೊವೀಡ್ ನಿಮಿತ್ತ ಕಳೆದ 2-3 ವರ್ಷಗಳಿಂದ ಡಾಲಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಈ ವರ್ಷ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಅಭಿಮಾನಿಗಳಿಗೆ ಸಮಯ ಮೀಸಲಿಟ್ಟು, ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಈಗ ಕನ್ನಡ ಸಿನಿಮಾರಂಗದ ನಟ-ನಟಿಯರ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ.

ಉತ್ತರಕಾಂಡ, ಪುಷ್ಪ 2, ಅಣ್ಣ From Mexico ಸೇರಿದಂತೆ ಹಲವು ಸಿನಿಮಾಗಳು ನಟ ಧನಂಜಯ್ ಕೈಯಲ್ಲಿದೆ. ಈ ವರ್ಷ ಡಾಲಿ ಪರ್ವ ಹೇಗಿರಲಿದೆ ಕಾದುನೋಡಬೇಕಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್