ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

Public TV
1 Min Read

ಸಿನಿಮಾದವರು ಏನೇ ಮಾಡಿದರೂ ಅದು ತಪ್ಪು ಎಂದು ಖಂಡಿಸುವ ಹಲವರಿಗೆ ತಮ್ಮದೇ ಆದ ರೀತಿಯಲ್ಲಿ ಉತ್ತರ ಕೊಟ್ಟಿದ್ದಾರೆ ನಟ ಉಪೇಂದ್ರ. ಇತ್ತೀಚಿನ ದಿನಗಳಲ್ಲಿ ಸಿನಿಮಾದ ಅನೇಕ ನಟ ನಟಿಯರು ಜೂಜು, ತಂಬಾಕು ವಸ್ತುಗಳು ಸೇರಿದಂತೆ ನಾನಾ ರೀತಿಯ ಜಾಹೀರಾತುಗಳಿಗೆ ರೂಪದರ್ಶಿಗಳಾಗುತ್ತಿದ್ದಾರೆ. ಈ ನಡೆಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಇಂತಹ ವಿರೋಧಿ ಮನಸ್ಸುಗಳಿಗೆ ಉಪೇಂದ್ರ ಉತ್ತರಿಸಿದ್ದಾರೆ. ಈ ಮೂಲಕ ಸರಕಾರಕ್ಕೂ ಅವರು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

ರಮ್ಮಿ ಆಟವೊಂದರ ಜಾಹೀರಾತಿನಲ್ಲಿ ಕಿಚ್ಚ ಸುದೀಪ್ ಅವರು ನಟಿಸಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿರೋಧ ವ್ಯಕ್ತವಾಯಿತು. ಈ ಆಟದಿಂದಾಗಿ ಹಲವರು ಮನೆ ಮಠ ಕಳೆದುಕೊಳ್ಳುತ್ತಿದ್ದಾರೆ ಸಾಮಾಜಿಕ ಜವಾಬ್ದಾರಿ ಇರುವವರು ಈ ರೀತಿ ಮಾಡಬಾರದು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ವಿರೋಧಿಸಿದರು. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

ನಿನ್ನೆಯಷ್ಟೇ ತಂಬಾಕು ಉತ್ಪನ್ನವೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅಕ್ಷಯ್ ಕುಮಾರ್ ನಾನು ಅಂತ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಬಾರದಿತ್ತು. ಕಾಣಿಸಿಕೊಂಡಿದ್ದಕ್ಕೆ ಅಭಿಮಾನಿಗಳಿಗೆ ಕ್ಷಮೆ ಕೋರುವೆ  ಎಂದಿದ್ದರು. ಮುಂದೆಂದೂ ಅಂತಹ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಅಶ್ವಾಸನೆಯನ್ನೂ ಅವರು ಕೊಟ್ಟಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

ಇವೆಲ್ಲವನ್ನೂ ಮುಂದಿಟ್ಟುಕೊಂಡು ಉಪೇಂದ್ರ ಫೇಸ್ ಬುಕ್ ನಲ್ಲಿ ‘ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋರು ತಪ್ಪು, ಕುಡಿಯೋದು ತಪ್ಪು, ಜೂಜಿಗೆ ಜಾಹೀರಾತು ನೀಡೋದು ತಪ್ಪು. ಆದರೆ, ಇವುಗಳಿಂದ ಬರೋ ತೆರಿಗೆ ಹಣಕ್ಕಾಗಿ ಇದಕ್ಕೆಲ್ಲಾ ಅನುಮತಿ ಕೊಟ್ಟಿರೋ ಸರಕಾರ ಸರಿ. ನಾಯಕ ಸಂಸ್ಕೃತಿಯ ರಾಜಕೀಯ ಗುಂಗಿನ ಸಮಾಜದಲ್ಲಿ  ಯಾವತ್ತೂ ಅಪ್ಪ ಸರಿ ಮಕ್ಕಳು ತಪ್ಪು’ ಎಂದು ಬರೆಯುವ ಮೂಲಕ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *