ರಾಜ್ಯದ 10 ತಿಂಗಳ ಮಗುವಿಗೆ ಕೊರೊನಾ ಪಾಸಿಟಿವ್

Public TV
2 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ತಗುಲಿದೆ.

ಮಗುವಿನ ಪೋಷಕರು ಬುಧವಾರ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ಆದರೆ ತಾಂತ್ರಿಕ ದೋಷವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿ, ಮರು ಪರೀಕ್ಷೆಗಾಗಿ ಸ್ವ್ಕಾಬ್ ಮತ್ತು ರಕ್ತದ ಮಾದರಿಯನ್ನು ಕಳುಹಿಸಿ ಕೊಟ್ಟಿದ್ದು, ಪಾಸಿಟಿವ್ ಎಂದು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಮಾರ್ಚ್ 26ರ ಸಂಜೆ 5ರಿಂದ ಮಾರ್ಚ್ 27ರ ಬೆಳಗ್ಗೆ 8ರವರೆಗೆ 7 ಹೊಸ ಸೋಂಕಿತ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಕರ್ನಾಟಕ ಸರ್ಕಾರವು ಮಾಹಿತಿ ನೀಡಿದೆ. ಇದನ್ನೂ ಓದಿ: ಹೆಣ್ಣು ಶಿಶುವಿಗೆ ಕೊರೊನಾ ಎಂದ ಹೆಸರಿಟ್ಟ ಚಿಕ್ಕಪ್ಪ

ಪ್ರಕರಣ 56: 10 ತಿಂಗಳ ಗಂಡು ಮಗು, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ, ಯಾವುದೇ ಕೋವಿಡ್-19 ಪ್ರಭಾವಿತ ದೇಶಕ್ಕೆ ಪ್ರಯಾಣಿಸಿದ ಹಿನ್ನಲೆಯಿರುವುದಿಲ್ಲ. ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ. ಪ್ರಾಥಮಿಕ ಮಾಹಿತಿ ಪ್ರಕಾರ ಪೋಷಕರು ಮಗುವಿನೊಂದಿಗೆ ಕೆಲವು ದಿನಗಳ ಹಿಂದೆ ಕೇರಳಕ್ಕೆ ಭೇಟಿ ನೀಡಿರುವ ಪ್ರಯಾಣ ಹಿನ್ನಲೆಯಿರುತ್ತದೆ. ಮಾಹಿತಿ ಕಲೆಹಾಕಲಾಗಿದ್ದು, ತಪಾಸಣೆ ಪ್ರಗತಿಯಲ್ಲಿರುತ್ತದೆ. ಜೊತೆಗೆ 6 ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಗುರುತಿಸಲಾಗಿದ್ದು, ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿರುತ್ತದೆ.

ಪ್ರಕರಣ 57: 20 ವರ್ಷದ ಮಹಿಳೆ ಬೆಂಗಳೂರು ನಿವಾಸಿಯಾಗಿದ್ದು, ಕೋಲಂಬೋ ದೇಶಕ್ಕೆ ಪ್ರಯಾಣ ಬೆಳೆಸಿ ಮಾರ್ಚ್ 15ರಂದು ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನಲೆಯಿರುತ್ತದೆ. ಪ್ರಕರಣವನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ. ಇದನ್ನೂ ಓದಿ:  ಪ್ರಪಂಚದ ಕ್ಯೂಟೆಸ್ಟ್ ಮಗುವಿಗೆ ಕೊರೊನಾ ವದಂತಿ – ತಾಯಿ ಸ್ಪಷ್ಟನೆ

ಪ್ರಕರಣ 58: 25 ವರ್ಷದ ಮಹಿಳೆ ಬೆಂಗಳೂರು ನಿವಾಸಿಯಾಗಿದ್ದು, ಲಂಡನ್ ದೇಶಕ್ಕೆ ಪ್ರಯಾಣ ಬೆಳೆಸಿ ಮಾರ್ಚ್ 18ರಂದು ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನಲೆಯಿರುತ್ತದೆ. ಪ್ರಕರಣವನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

ಪ್ರಕರಣ 59: 35 ವರ್ಷದ ಮಹಿಳೆ ಬೆಂಗಳೂರು ನಿವಾಸಿಯಾಗಿದ್ದು ಪ್ರಕರಣ 25ರ ಸಂಪರ್ಕ ವ್ಯಕ್ತಿ (ಮನೆ ಕೆಲಸದ ಮಹಿಳೆ) ಈ ಪ್ರಕರಣವನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

ಪ್ರಕರಣ 60: 60 ವರ್ಷದ ಪುರುಷ ತುಮಕೂರು ಜಿಲ್ಲೆಯ ನಿವಾಸಿಯಾಗಿದ್ದು, ದೆಹಲಿಗೆ ರೈಲು ಮುಖಾಂತರ ಮಾರ್ಚ್ 13ರಂದು ಪ್ರಯಾಣ ಬೆಳೆಸಿರುತ್ತಾರೆ. ಇವರು ಮಾರ್ಚ್ 27ರಂದು ಬೆಳಗ್ಗೆ ತುಮಕೂರು ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ. 24 ಹೈರಿಸ್ಕ್ ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಗುರುತಿಸಲಾಗಿರುತ್ತದೆ. ಇವರುಗಳಲ್ಲಿ 13 ಪ್ರಕರಣಗಳನ್ನು ನಿಗಧಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ ಮತ್ತು 8 ನೆಗೆಟಿವ್ ಪ್ರಕರಣಗಳು ಹಾಗೂ 3 (ವೈದ್ಯಕೀಯ ಸಿಬ್ಬಂದಿ) ಪ್ರಕರಣಗಳನ್ನು ಮನೆ ಕ್ವಾರಂಟೈನ್ ಮಾಡಲಾಗಿರುತ್ತದೆ.

ಪ್ರಕರಣ 61: 33 ವರ್ಷದ ಮಹಿಳೆ ಬೆಂಗಳೂರು ನಿವಾಸಿಯಾಗಿದ್ದು, ಪ್ರಕರಣ 25ರ ಸಂಪರ್ಕ ವ್ಯಕ್ತಿ (ಮನೆ ಕೆಲಸದ ಮಹಿಳೆ) ಈ ಪ್ರಕರಣವನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

ಪ್ರಕರಣ 62: 22 ವರ್ಷದ ಪುರುಷ, ಉತ್ತರ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನಲೆಯಿರುತ್ತದೆ. ಪ್ರಕರಣವನ್ನು ಉತ್ತರ ಕನ್ನಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.

ಪ್ರಕರಣ 1 ಮತ್ತು ಪ್ರಕರಣ 3 ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ರಾಜ್ಯದಲ್ಲಿ ಈವರೆಗೂ ಮೂವರು ಕೊರೊನಾಗೆ ಬಲಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *