ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಾನುವಾರ ನೆಹರೂ ಮೈದಾನ ಬಳಿಯ ಫುಟ್‌ಬಾಲ್ ಮೈದಾನದಲ್ಲಿ ಹಮ್ಮಿಕೊಂಡ ಪತ್ರಕರ್ತರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕ್ರಿಕೆಟ್ ಟೂರ್ನಿಯಲ್ಲಿ ಪ್ರೆಸ್ ಇಲೆವೆನ್ ತಂಡ ಪ್ರಥಮ ಹಾಗೂ ಹೊಸದಿಗಂತ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿತು. ವೈಯುಕ್ತಿಕ ಹಾಗೂ ತಂಡ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಚುನಾಯಿತ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ಕೆನರಾ ಬ್ಯಾಂಕ್‍ನ ಡಿಜಿಎಂ ಯೋಗೀಶ್ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು. ಇದನ್ನೂ ಓದಿ: 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಬೆಂಗಳೂರು ಸಜ್ಜು
ಶಾಸಕ ವೇದವ್ಯಾಸ ಕಾಮತ್ ಕ್ರೀಡಾಕೂಟಕ್ಕೆ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ವಂದಿಸಿದರು. ಆರ್.ಸಿ. ಭಟ್ ವಿಜೇತರ ಪಟ್ಟಿ ವಾಚಿಸಿದರು. ವಿಜಯ್ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಪ್ರ.ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ