ಪಾತ್ರೆಯಲ್ಲಿದ್ದ ನೀರು ಕುಡಿದ ದಲಿತ ಬಾಲಕನಿಗೆ ಥಳಿಸಿ ಕೊಂದ ಶಿಕ್ಷಕ

Public TV
1 Min Read

ಜೈಪುರ: ಖಾಸಗಿ ಶಾಲೆಯೊಂದರಲ್ಲಿ ಪಾತ್ರೆಯಲ್ಲಿದ್ದ ನೀರು ಕುಡಿದಿದ್ದಕ್ಕೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಅಮಾನವೀಯವಾಗಿ ಥಳಿಸಿದ್ದರಿಂದ ಬಾಲಕ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ.

ಜುಲೈ 20 ರಂದು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯಲ್ಲಿ ಈ ಘಟನೆ ಜರುಗಿದ್ದು, ಗಾಯಗೊಂಡ ಬಾಲಕ ಗುಜರಾತಿನ ಅಹಮದಾಬಾದ್‍ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರಿಂದ ಕೃತ್ಯ

ಇದೀಗ 40 ವರ್ಷದ ಆರೋಪಿ ಶಿಕ್ಷಕ ಚೈಲ್ ಸಿಂಗ್ ಅನ್ನು ಪೊಲೀಸರು ಬಂಧಿಸಿದ್ದು, ಕೊಲೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಇದೊಂದು ದುರಂತ ಘಟನೆ ಎಂದಿದ್ದಾರೆ. ಜಾಲೋರ್‍ನ ಸೈಲಾ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ನಡೆಸಿದ ಹಲ್ಲೆಯಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದು ದುರಂತವಾಗಿದ್ದು, ಆರೋಪಿಗಳ ವಿರುದ್ಧ ಕೊಲೆ ಹಾಗೂ ಎಸ್‍ಸಿ/ಎಸ್‍ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *