ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿಗೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ

Public TV
1 Min Read

ಚೆನ್ನೈ: ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿಯ ದಲಿತ ವಿದ್ಯಾರ್ಥಿನಿಯನ್ನು ಕ್ಲಾಸ್ ರೂಂ ಹೊರಗೆ ಪರೀಕ್ಷೆಗೆ ಕೂರಿಸಿರುವ ಅಮಾನವೀಯ ಘಟನೆ ತಮಿಳುನಾಡಿನ ʼ(Tamlinadu) ಕೊಯಮತ್ತೂರು (Coimbatore) ಜಿಲ್ಲೆಯ ಕಿನಾಥುಕಡವು ಬಳಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.

ಕಿನಾಥುಕಡವು ತಾಲೂಕಿನ ಸೆಂಗುಟ್ಟೈಪಾಳ್ಯಂ ಗ್ರಾಮದಲ್ಲಿರುವ ಸ್ವಾಮಿ ಚಿದ್ಭವಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿನಿ 8ನೇ ತರಗತಿ ಓದುತ್ತಿದ್ದಳು. ಏ.5 ರಂದು ವಿದ್ಯಾರ್ಥಿನಿಗೆ ಪಿರಿಯಡ್ಸ್ ಆಗಿತ್ತು. ಹೀಗಾಗಿ ಪಿರಿಯಡ್ಸ್ ನಂತರ, ಶಾಲಾ ಆಡಳಿತ ಮಂಡಳಿಯು ಏ.7 ರಂದು ವಿಜ್ಞಾನ ಪರೀಕ್ಷೆ ಮತ್ತು ಏ.9 ರಂದು ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು.ಇದನ್ನೂ ಓದಿ: 64 ವಯಸ್ಸಿನ ಉಗ್ರ ರಾಣಾ ಫೋಟೊ ರಿಲೀಸ್‌

ಏ.7 ರಂದು ವಿಜ್ಞಾನ ಪರೀಕ್ಷೆಯಲ್ಲಿ ತರಗತಿಯ ಹೊರಗೆ ಕೂರಿಸಿರುವುದಾಗಿ ವಿದ್ಯಾರ್ಥಿನಿ ತನ್ನ ತಾಯಿಗೆ ತಿಳಿಸಿದ್ದಳು. ಮುಂದಿನ ಪರೀಕ್ಷೆಗೆ ವಿದ್ಯಾರ್ಥಿನಿಯ ತಾಯಿ ಶಾಲೆಗೆ ತೆರಳಿದ್ದು, ತರಗತಿಯ ಹೊರಗೆ ಕೂರಿಸಿರುವುದನ್ನು ಗಮನಿಸಿದರು. ಬಳಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್.ಜಿ.ಗಿರಿಯಪ್ಪನವರ್ ಮಾತನಾಡಿ, ಕೊಯಮತ್ತೂರು ಗ್ರಾಮೀಣ ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

Share This Article