ಯುವತಿ ಪ್ರಕರಣ ವಾಪಸ್ ಪಡೆಯದ್ದಕ್ಕೆ ಆಕೆಯ ತಾಯಿಯನ್ನೇ ವಿವಸ್ತ್ರಗೊಳಿಸಿ ಥಳಿಸಿದ್ರು!

Public TV
1 Min Read

ಭೋಪಾಲ್: ಯುವತಿಯೊಬ್ಬಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ವಿಚಾರಕ್ಕೆ ನೂರಾರು ಜನರ ಗುಂಪು ಆಕೆಯ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ (Madhya Pradesh) ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಈ ವೇಳೆ ಯುವತಿಯ ಸಹೋದರನ ಮೇಲೂ ಹಲ್ಲೆ ನಡೆಸಲಾಗಿದ್ದು ಆತ ಸಾವನ್ನಪ್ಪಿದ್ದಾನೆ.

18ರ ದಲಿತ ಯುವತಿಯೊಬ್ಬಳು ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಕೆಲವರು ಒತ್ತಡ ಹೇರಿದ್ದಾರೆ. ಆದರೆ ಯುವತಿ ದೂರು ವಾಪಸ್ ಪಡೆಯಲು ಒಪ್ಪದಿದ್ದಾಗ ಈ ದಾಳಿ ನಡೆದಿದೆ. ಈ ಪ್ರಕರಣದಲ್ಲಿ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ. ಮೂವರ ವಿರುದ್ಧ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಲ್ಲಿಯವರೆಗೂ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲಿಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ವೈದ್ಯನನ್ನು 50 ಮೀಟರ್ ಎಳೆದೊಯ್ದ!

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಯುವತಿಯ ತಾಯಿ, ಜನರ ಗುಂಪು ನಮ್ಮ ಮನೆಯನ್ನು ಧ್ವಂಸಗೊಳಿಸಿತು. ಮನೆಯ ಯಾವ ಸಾಮಾಗ್ರಿಯನ್ನೂ ಬಿಡದೆ ನಾಶ ಮಾಡಿದ್ದಾರೆ. ಮನೆಯ ಚಾವಣಿಯನ್ನು ಹಾಳು ಮಾಡಿದ್ದಾರೆ. ಬಳಿಕ ಇಬ್ಬರು ಮಕ್ಕಳನ್ನು ಹುಡುಕಿಕೊಂಡು ಮತ್ತೊಂದು ಮನೆಗೆ ಹೋದರು. ಅಲ್ಲಿ ಪತಿ ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದಿದ್ದಾರೆ.

ಘಟನೆಯ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳುವುದಾಗಿ ಮಹಿಳೆಗೆ ಭರವಸೆ ನೀಡಿದೆ.

2019 ರಲ್ಲಿ ನಾಲ್ಕು ಪುರುಷರ ವಿರುದ್ಧ ಮಹಿಳೆಯ ಮಗಳು ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು. ಇದೇ ವಿಚಾರಕ್ಕೆ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ದೂರಿನಲ್ಲಿ ಉಲ್ಲೇಖಿಸಲಾದ ಎಲ್ಲರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ಅತ್ಯಾಚಾರ – ಸ್ವಯಂ ದೂರು ದಾಖಲಿಸಿಕೊಂಡ ದೆಹಲಿ ಹೈಕೋರ್ಟ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್