ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Public TV
2 Min Read

– ಸಾಗರದಷ್ಟು ಸವಾಲು ಎದುರಾದರೂ ಮೆಟ್ಟಿ ನಿಲ್ಲುವ ಶಕ್ತಿ ನಿನ್ನಲ್ಲಿದೆ – ಸುಮಲತಾ ವಿಶ್‌

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan), ಅಭಿಮಾನಿಗಳ ಪಾಲಿನ ʻಡಿ ಬಾಸ್ʼಇಂದು 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಸಾಮಾನ್ಯವಾಗಿ ದರ್ಶನ್ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳಿಗೆ ಸಡಗರ, ಅಂದು ಅನೇಕ ಕಾರ್ಯಕ್ರಮಗಳನ್ನು ಇಟ್ಟುಕೊಳ್ಳುತ್ತಿದ್ದರು. ಮನೆಯ ಮುಂದೆ ಹಬ್ಬದ ವಾತಾವರಣ ಇರುತ್ತಿತ್ತು. ಆದರೆ ಈ ಬಾರಿ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಇತ್ತೀಚೆಗಷ್ಟೇ ವಿಡಿಯೋ ಮಾಡಿ ತಮ್ಮ ಅಭಿಮಾನಿಗಳಿಗೆ ದರ್ಶನ್ ವಿನಂತಿ ಮಾಡಿಕೊಂಡಿದ್ದರು.

ಆತ್ಯಾಪ್ತರಿಗಷ್ಟೇ ಆಹ್ವಾನ:
ದರ್ಶನ್‌ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅತ್ಯಾಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಆತ್ಮೀಯರಿಗಷ್ಟೇ ಆಹ್ವಾನ ನೀಡಿದ್ದರು. ರಾತ್ರಿ ದರ್ಶನ್‌ ನಿವಾಸದಲ್ಲೇ ನಡೆದ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟಿ ರಕ್ಷಿತಾ ಪ್ರೇಮ್, ನಟ ಧನ್ವಿರ್, ದರ್ಶನ್ ಸಹೋದರ ದಿನಕರ್ ತೂಗುದೀಪ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕೇಕ್‌ ಕತ್ತರಿಸಿ, ದರ್ಶನ್‌ಗೆ ಶುಭ ಹಾರೈಸಿದರು.

ಪ್ರೀತಿಯ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ….
ಇನ್ನೂ ದರ್ಶನ್‌ ಹುಟ್ಟುಹಬ್ಬಕ್ಕೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಸಹ ಶುಭಾಶಯಗ ಕೋರಿದ್ದಾರೆ. ಈ ಸಂದೇಶವನ್ನು ತಮ್ಮ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಪ್ರೀತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಧನೆಯ ಶಿಖರವೇರುತ್ತಿರುವಾಗ ಸಾಗರದಷ್ಟು ಸವಾಲು ಎದುರಾದರೂ ಮೆಟ್ಟಿ ನಿಲ್ಲುವ ಶಕ್ತಿ ನಿನ್ನಲ್ಲಿದೆ. ಸದಾ ಸಂತೋಷ ಹಾಗೂ ಯಶಸ್ಸಿನ ಜೀವನ ನಿನ್ನದಾಗಲಿ ಎಂದು ಶುಭ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ (Dhanveer) ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಷ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ.

Share This Article