ಬೆಳಗಾವಿಯ ಹಿಂಡಲಗಾ ಜೈಲಿಗೆ ದರ್ಶನ್ ಶಿಫ್ಟ್?

By
1 Min Read

ಬೆಳಗಾವಿ: ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ (Parappana Agrahara) ದರ್ಶನ್ ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬೇರೆ ಜೈಲಿಗೆ ಕಳುಹಿಸಲು ಸೂಚನೆ ನೀಡಿದ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿಗೆ (Hindalga Jail) ದರ್ಶನ್ ಸ್ಥಳಾಂತರವಾಗುವ ಸಾಧ್ಯತೆಯಿದೆ.

ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ (Malini Krishnamurthy) ಪ್ರಮುಖ ಜೈಲುಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಮತ್ತು ದರ್ಶನ್ ಅಥವಾ ಆತನ ಗ್ಯಾಂಗ್ ಶಿಫ್ಟ್ ಮಾಡಿದರೆ ಆಗುವ ಸಾಧಕ ಬಾಧಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಇದರಿಂದಾಗಿ ಆರೋಪಿ ನಟ ದರ್ಶನ್ ಅಥವಾ ಆತನ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ದರ್ಶನ್‌ನನ್ನು ಬೇರೆ ಜೈಲಿಗೆ ಕಳಿಸಿ: ಸಿಎಂ ತಾಕೀತು

 

ಈಗಾಗಲೇ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗಾ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವರು ಸೆರೆವಾಸ ಅನುಭವಿಸಿದ್ದಾರೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಕೂಡ ಹಿಂಡಲಗಾ ಜೈಲಿನಲ್ಲಿದ್ದರು. ಇದನ್ನೂ ಓದಿ: ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಚೆಕ್‌ ಮಾಡಿ ಶೂಟೌಟ್‌ – 23 ಮಂದಿ ಬಲಿ

 

Share This Article