‘ದಿ ಡೆವಿಲ್’ ಶೂಟಿಂಗ್ ಮತ್ತೆ ಆರಂಭ- ದರ್ಶನ್ ಭದ್ರತೆಗಾಗಿ ಭಾರೀ ಮೊತ್ತ ಕಟ್ಟಿದ ಚಿತ್ರತಂಡ

Public TV
1 Min Read

ಟ ದರ್ಶನ್ (Darshan) ಮತ್ತೆ ‘ದಿ ಡೆವಿಲ್’ (The Devil) ಶೂಟಿಂಗ್‌ಗೆ ಎಂಟ್ರಿ ಕೊಡಲಿದ್ದಾರೆ. ಮೈಸೂರಿನಲ್ಲಿ ಸ್ಥಗಿತಗೊಂಡಿದ್ದ ಶೂಟಿಂಗ್ ಮತ್ತೆ ಚಾಲನೆ ನೀಡಲಾಗುತ್ತಿದೆ. ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಭದ್ರತೆಗಾಗಿ ಭಾರೀ ಮೊತ್ತ ಹಣವನ್ನು ಚಿತ್ರತಂಡ ಖರ್ಚು ಮಾಡಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಮತ್ತೆ ಕಿರುತೆರೆಗೆ ಕಿರಣ್ ರಾಜ್

ಮಾರ್ಚ್ 12ರಿಂದ 15ರವರೆಗೆ ಮೈಸೂರಿನಲ್ಲಿ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ಮಾಡಲು ಅನುಮತಿ ಸಿಕ್ಕಿದೆ. ಮಾ.12ರಿಂದ ಮಾ.14ರವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ಚಿತ್ರತಂಡ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲಿದ್ದಾರೆ. ಮಾ.15ರಂದು ಲಲಿತಮಹಲ್ ಪ್ಯಾಲೆಸ್‌ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದಾರೆ. ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಟನ ಭದ್ರತೆಗಾಗಿ  ಸಿಬ್ಬಂದಿ ನಿಯೋಜಿಸಲು 1,64,785 ರೂ. ‘ದಿ ಡೆವಿಲ್’ ಚಿತ್ರತಂಡ ಪಾವತಿಸಿದೆ.

ಅಂದಹಾಗೆ, 10 ತಿಂಗಳ ಹಿಂದೆ ಮೈಸೂರಿನಲ್ಲಿ ರೇಣುಕಾಸ್ವಾಮಿ ಪ್ರಕರಣದ ಸಂಬಂಧ ದರ್ಶನ್ ಬಂಧನವಾಗಿತ್ತು. ‘ಡೆವಿಲ್’ ಸಿನಿಮಾಗೆ ಚಿತ್ರೀಕರಣಕ್ಕೆಂದು ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ತಂಗಿದ್ದ ವೇಳೆ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ 10 ತಿಂಗಳ ಬಳಿಕ ಮತ್ತೆ ಮೈಸೂರಿನಲ್ಲಿ ‘ದಿ ಡೆವಿಲ್’ ಶೂಟಿಂಗ್ ನಡೆಯಲಿದೆ.

ಇನ್ನೂ ಈ ಸಿನಿಮಾಗೆ ಮಿಲನಾ ಪ್ರಕಾಶ್‌ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್‌ಗೆ ರಚನಾ ರೈ ಜೋಡಿಯಾಗಿದ್ದಾರೆ. ‘ಬಿಗ್‌ ಬಾಸ್‌ ಕನ್ನಡ 10’ರ ಸ್ಪರ್ಧಿ ವಿನಯ್‌ ಗೌಡ ಕೂಡ  ಈ ಚಿತ್ರದಲ್ಲಿ ನಟಿಸಲಿದ್ದಾರೆ.

Share This Article