ಅಣ್ಣಮ್ಮ ದೇವಿಗೆ ಹರಕೆ ಸಲ್ಲಿಸಿದ ದರ್ಶನ್ ಪತ್ನಿ

Public TV
1 Min Read

ಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಮೆಜೆಸ್ಟಿಕ್‌ನಲ್ಲಿರುವ ಅಣ್ಣಮ್ಮ ದೇಗುಲಕ್ಕೆ (Annamma Devi Temple) ಭೇಟಿ ನೀಡಿದ್ದಾರೆ. ದೇವಿಗೆ ವಿಜಯಲಕ್ಷ್ಮಿ ಹರಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಬಂದೋಬಸ್ತ್‌ಗೆ 3 ಲಕ್ಷ ರೂ. ಕಟ್ಟಿಸಿಕೊಂಡ್ರಾ ಪೊಲೀಸರು?

ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ದರ್ಶನ್ ಪತ್ನಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ. ಇದನ್ನೂ ಓದಿ:ಕೊಲೆ ಕೇಸ್ ಸಾಕ್ಷ್ಯಿಧಾರನ ಜೊತೆ ಪ್ರಭಾವ ಬೀರುತ್ತಿದ್ದಾರಾ ದರ್ಶನ್?

ಅಂದಹಾಗೆ, ರಾಜಸ್ಥಾನದಲ್ಲಿ ನಡೆದ ‘ಡೆವಿಲ್’ ಶೂಟಿಂಗ್‌ನಲ್ಲಿ ದರ್ಶನ್ ಜೊತೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಕೂಡ ಭಾಗಿಯಾಗಿದ್ದರು. ಕಳೆದ ವಾರ ಏ.4ರಂದು ಬೆಂಗಳೂರಿಗೆ ಚಿತ್ರೀಕರಣ ಮುಗಿಸಿ ವಾಪಸ್ ಆದರು.

Share This Article