ದರ್ಶನ್‌ಗೆ ಜಾಮೀನು ಸಿಕ್ಕ ಬೆನ್ನಲ್ಲೇ ವಿಜಯಲಕ್ಷ್ಮಿ ಟೆಂಪಲ್ ರನ್

Public TV
1 Min Read

ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ (Darshan) ಕೊಲೆ ಪ್ರಕರಣದಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು (Bail) ಸಿಕ್ಕ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿಯ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ದರ್ಶನ್‌ಗೆ ಬೇಲ್ ಸಿಕ್ಕಿದ್ದಕ್ಕೆ ಮನಸ್ಸು ನಿರಾಳ ಆಗಿದೆ: ತರುಣ್ ಸುಧೀರ್

ದುರ್ಗಮ್ಮ ದೇವಸ್ಥಾನಕ್ಕೆ ಕುಟುಂಬಸ್ಥರ ಜೊತೆ ವಿಜಯಲಕ್ಷ್ಮಿ (Vijaylakshmi) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದರ್ಶನ್ ಪತ್ನಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.

ಅದಷ್ಟೇ ಅಲ್ಲ, ದುರ್ಗಮ್ಮ ದೇವಸ್ಥಾನದಲ್ಲಿ ನಟನ ಫ್ಯಾನ್ಸ್ ನೂರಾರು ತುಪ್ಪದ ದೀಪಗಳನ್ನು ಬೆಳಗಿಸಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮೂಲಕ ದರ್ಶನ್‌ಗೆ ಬೇಲ್ ಸಿಕ್ಕಿದ್ದಕ್ಕೆ ಸಂಭ್ರಮಿಸಿದ್ದಾರೆ.

Share This Article