ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

By
1 Min Read

– ಮಗನ ಆತ್ಮಕ್ಕೆ ಶಾಂತಿ ಸಿಕ್ಕಂತಾಯ್ತು: ರೇಣುಕಾಸ್ವಾಮಿ ತಾಯಿ

ಚಿತ್ರದುರ್ಗ: ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದು ರೇಣುಕಾಸ್ವಾಮಿ (Renukaswamy) ಪತ್ನಿ ಸಹನಾ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ದರ್ಶನ್ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ (Supreme Court) ರದ್ದುಗೊಳಿಸಿದೆ. ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ರೇಣುಕಾಸ್ವಾಮಿ ಕುಟುಂಬ ಸ್ವಾಗತಿಸಿದೆ. ಇದನ್ನೂ ಓದಿ: ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್

ಇನ್ನು ಈ ಕುರಿತು ರೇಣುಕಾಸ್ವಾಮಿ ಚಿಕ್ಕಪ್ಪ ಷಡಾಕ್ಷರಿ ಮಾತನಾಡಿ, ಸರ್ಕಾರ ಮುಂದೆ ಹೋಗದಿದ್ದರೆ ತಪ್ಪು, ಸರಿ ಅರ್ಥ ಆಗ್ತಿರಲಿಲ್ಲ. ಶೀಘ್ರ, ತ್ವರಿತ ವಿಚಾರಣೆಗೆ ಸುಪ್ರೀಂ ಆದೇಶಿಸಿದೆ. ಟ್ರಯಲ್‌ಕೋರ್ಟ್ ವಿಚಾರಣೆಗೆ ನಾವು ಒತ್ತಾಯಿಸಿದ್ದೆವು. ಸುಪ್ರೀಂ ಕೂಡ ನಮಗೆ ನ್ಯಾಯ ಒದಗಿಸಿದೆ. ಕಾನೂನನ್ನು ಗೌರವಿಸುತ್ತೇವೆ. ತಪ್ಪು ಮಾಡಿದವರಿಗೆ ತಕ್ಕ ಶಾಸ್ತಿಯಾಗಿದೆ. ಚಿಕ್ಕ ವಯಸ್ಸಿನ ರೇಣುಕಾಸ್ವಾಮಿ ಪತ್ನಿ ಸಹನ, ಚಿಕ್ಕ ಹೆಣ್ಣುಮಗಳು. ಆಕೆಗೆ ವಿಶೇಷ ಪ್ರಕರಣದಡಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ – ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ

ಈ ಬಗ್ಗೆ ಮಾತನಾಡಿದ ರೇಣುಕಾಸ್ವಾಮಿ ತಾಯಿ ರತ್ನಮಾಲ, ಬೇಲ್ ರದ್ದುಪಡಿಸಿರೋದು ಸ್ವಾಗತಾರ್ಹ. ಮಗನ ಸಾವಿಗೆ ನ್ಯಾಯ ಸಿಕ್ಕಿದೆ. ಕೋರ್ಟ್, ಕಾನೂನಿನ ಬಗ್ಗೆ ನಂಬಿಕೆ ಇದೆ. ಇಂದು ಮನೆದೇವರಿಗೆ ಅಭಿಷೇಕ ಸಲ್ಲಿಸಲು ಹೊರಟಿದ್ದೆವು. ಇಂದೇ ತೀರ್ಪು ಇರುವ ಬಗ್ಗೆ ಮಾಹಿತಿ ಇರಲಿಲ್ಲ. ಇಂದು ಒಳ್ಳೆಯ ತೀರ್ಪು ಬಂದಿದೆ. ಮಗನ ಆತ್ಮಕ್ಕೆ ಶಾಂತಿ ಸಿಕ್ಕಂತಾಯ್ತು ಎಂದರು. ಇದನ್ನೂ ಓದಿ: ಕೊಲೆ ಕೇಸಲ್ಲಿ ಜಾಮೀನು ರದ್ದು – ಮತ್ತೆ ಜೈಲಿಗೆ ದರ್ಶನ್

Share This Article