– ಪೊಲೀಸ್ ದೂರು ನೀಡಿಲ್ಲ ಯಾಕೆ?
ಬೆಂಗಳೂರು: ದರ್ಶನ್ ಅಭಿಮಾನಿಗಳಿಂದ ಹಲ್ಲೆ ನಡೆದಿದೆ ಎಂದು ಆರೋಪ ಮಾಡಿದ ನಟ ಪ್ರಥಮ್ (Pratham) ಅವರು ಪೊಲೀಸ್ ಠಾಣೆಗೆ (Police Station) ಹೋಗಿ ಯಾಕೆ ದೂರು ನೀಡಿಲ್ಲ ಎಂದು ದರ್ಶನ್ (Darashan) ಅವರ ಫ್ಯಾನ್ ಪೇಜ್ D Company Fans Association ಪ್ರಶ್ನೆ ಮಾಡಿದೆ.
ದೊಡ್ಡಬಳ್ಳಾಪುರ (Doddaballapura) ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಡ್ರ್ಯಾಗರ್ ತೋರಿಸಿ ನನಗೆ ಜೀವ ಬೆದರಿಕೆ ಒಡ್ಡಿತ್ತು. ದರ್ಶನ್ ಅಭಿಮಾನಿಗಳು ಅಂತ ಹೇಳಿಕೊಂಡು ಕೆಲವರು ಬೆದರಿಕೆ ಹಾಕಿದ್ದರು ಎಂಬುದಾಗಿ ನಟ ಆರೋಪ ಮಾಡಿದ್ದರು. ಈ ಆರೋಪಕ್ಕೆ D Company Fans Association ಹಲವು ಪ್ರಶ್ನೆಗಳನ್ನು ಕೇಳಿ ತಿರುಗೇಟು ನೀಡಿದೆ.
ಪೋಸ್ಟ್‌ನಲ್ಲಿ ಏನಿದೆ?
ಪ್ರಥಮ್ ಮೇಲೆ ಹಲ್ಲೆ ಪ್ರಕರಣ ಸತ್ಯ ಹೊರ ಬಂದಿದೆ. ರೌಡಿಗಳ ಜೊತೆ ಹೋಗಿ ಅವರ ಕಾರ್ಯಕ್ರಮದಲ್ಲಿ ಅವರ ಹತ್ತಿರನೇ ತಿಂದು ಅವರಿಗೆ ರೇಗಿಸಿ ಬ್ರೆಡ್ ಚಿಪ್ಸ್ ಕೇಳಿ ಖಾರ ಬನ್ ತಿಂದ ಪ್ರಕರಣವಿದು. ಇದನ್ನೂ ಓದಿ: ನಂಬರ್ ಇಲ್ಲ, ಸಂಪರ್ಕದಲ್ಲೂ ಇಲ್ಲ, ದರ್ಶನ್‌ಗೆ 100% ಜವಾಬ್ದಾರಿ ಇದೆ: ರಮ್ಯಾ
ನಮ್ಮ ಪ್ರಶ್ನೆ ದರ್ಶನ್ ಅವರು ಜೈಲಲ್ಲಿ ಇದ್ದಾಗ ಅಭಿಮಾನಿಗಳಿಗೆ ಪ್ರಚೋದನೆ ಹೇಳಿಕೆ ನೀಡಿ ಕಾಮೆಂಟ್ ಮಾಡಿದವರ ವಿರುದ್ಧ ಸಾಲು ಸಾಲು ದೂರು ದಾಖಲಿಸಿದ ಕುತಂತ್ರಿಗೆ ಹಲ್ಲೆ ನಡೆದರೂ ದೂರು ನೀಡಿದಷ್ಟು ಒಳ್ಳೆ ಮನಸ್ಸು ಇದೆಯಾ?
ಕಾರಣ ಇಷ್ಟೇ ಅಂದು ಪೊಲೀಸ್ ದೂರು ನೀಡಲು ವೈದ್ಯರ ವರದಿ ಬೇಕು. ಸರ್ಕಾರಿ ಆಸ್ಪತ್ರೆಗೆ ಹೋದರೆ ವೈದ್ಯರ ಪರೀಕ್ಷೆಯಲ್ಲಿ ಕುಡಿದಿರುವುದು ಬೆಳಕಿಗೆ ಬರುತ್ತದೆ. ಕುಡುಕರ ಗಲಾಟೆ ಎಂದು ವರದಿ ನೀಡುತ್ತಾರೆ. ಎರಡು ಮೂರು ದಿನ ಕಳೆದರೆ ಸತ್ಯ ಯಾರಿಗೂ ತಿಳಿಯುವುದಿಲ್ಲ. ಇದು ನಿಮ್ಮ ಗೇಮ್ ಹಾಗೂ ನಿಮಗೆ ಪ್ರೋತ್ಸಾಹ ಧನ ಸಹಾಯ ಮಾಡುವವರ ಹುನ್ನಾರ. ಹೇಗಿದ್ದರೂ ನೀವು ನಿರ್ದೇಶಕರು ಅಲ್ಲವೇ? ಸ್ವಾಮಿ ಕಥೆ ಚಿತ್ರಕಥೆ ಸಂಭಾಷಣೆ ಚೆನ್ನಾಗಿ ರಚನೆ ಮಾಡಿದ್ದೀರಿ.
ರೌಡಿಗಳ ಕಾರ್ಯಕ್ರಮದಲ್ಲಿ ನಿಮಗೆ ಏನು ಕೆಲಸ? ನೀವು ಸಭ್ಯರು ತಾನೆ ರೌಡಿಗಳು ಅಂತ ತಿಳಿದ ಕೂಡಲೇ ಕಾರು ಹತ್ತಿ ಹೋಗಬೇಕಿತ್ತು. ಅವರ ಜೊತೆ ಸಮಯ ಕಳೆದು ಮತ್ತಿನಲ್ಲಿ ಮಾಡಿಕೊಂಡ ಎಡ್ಡವಟಿಗೆ ಬಾಸ್ ಹೆಸರು ತಳುಕು ಯಾಕೆ ?
ದರ್ಶನ್ ಅವರ ಅಧಿಕೃತ ಸಂಘಟನೆಗಳು ನೂರಾರಿವೆ? ರಿಜಿಸ್ಟರ್ ಪಟ್ಟಿ ನಮ್ಮತ್ರ ಇದೆ ನಮ್ಮ ಸಂಘದ ಸದಸ್ಯರು, ಪದಾಧಿಕಾರಿಗಳು ಯಾರಾದ್ರೂ ಬೆದರಿಕೆ ಹಾಕಿದರೆ ಹೇಳಿ ಸ್ವಾಮಿ. ಪ್ರೈವೇಟ್ ತೋಟದಲ್ಲಿ ಅಮಲಿನ ನಡೆದ ಜಗಳಕ್ಕೆ ನಮ್ಮ ನಟ ಆಗಲಿ ನಮ್ಮ ಅಭಿಮಾನಿಗಳು ಆಗಲಿ ಹೊಣೆ ಯಾಕೆ ಸ್ವಾಮಿ?
ಗೂಂಡಾಗಳನ್ನು ಸಾಕಬೇಡಿ ಮನೆಯಲ್ಲಿ ನಾಯಿ ಸಾಕಿ ಅಂದ ನಟನಿಗೆ ಸಿನಿಮಾ ಪ್ರಚಾರಕ್ಕೆ ದುಡಿಲ್ಲ ಅಂದರೆ ಹೇಳಿ ದರ್ಶನ್ ಅಣ್ಣ ಪ್ಲೀಸ್ ನಿಮ್ಮ ಮನೆ ನಾಯಿಗೆ ಹಾಕುವ ಊಟದಲ್ಲಿ ಚೂರು ಹಾಕಿ.