ನಟ ದರ್ಶನ್ ಥೈಲ್ಯಾಂಡ್‌ಗೆ ತೆರಳಿದ್ದಾರೆ. ಪುತ್ರ ವಿನೀಶ್ ಕೂಡ ದರ್ಶನ್‌ಗೆ ಜೊತೆಯಾಗಿ ಪ್ರಯಾಣಿಸಿದ್ದಾರೆ. ಡೆವಿಲ್ ಚಿತ್ರದ ನಿರ್ದೇಶಕ ಪ್ರಕಾಶ್ ಜಯರಾಂ ಸೇರಿ ಚಿತ್ರತಂಡ ದರ್ಶನ್ ಜೊತೆಯೇ ಪ್ರಯಾಣ ಬೆಳೆಸಿದ್ದಾರೆ.
ಮಂಗಳವಾರ ರಾತ್ರಿ ದರ್ಶನ್ ಥೈಲ್ಯಾಂಡ್‌ಗೆ ತೆರಳಿದ್ದು ,ಬ್ಯಾಂಕಾಕ್ ತಲುಪಿದ್ದಾರೆ. ಗುರುವಾರದಿಂದ ಹಾಡಿನ ಚಿತ್ರೀಕರಣ ಪ್ರಾರಂಭವಾಗಿ ಐದು ದಿನ ನಡೆಯುತ್ತೆ. ಕೊಲೆ ಆರೋಪಿಯಾದ್ಮೇಲೆ ಪ್ರಥಮ ಬಾರಿಗೆ ದರ್ಶನ್ ವಿದೇಶ ಪ್ರಯಾಣ ಮಾಡುತ್ತಿದ್ದು , ಹತ್ತು ದಿನ ಥೈಲ್ಯಾಂಡ್‌ನಲ್ಲಿರುವ ಸಾಧ್ಯತೆ ಇದೆ.ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
ಮಂಗಳವಾರ ರಾತ್ರಿ ಬೆಂಗಳೂರು ಇಂಟರ್‌ನ್ಯಾಶನಲ್ ವಿಮಾನ ನಿಲ್ದಾಣದಲ್ಲಿ ದರ್ಶನ್ ಪುತ್ರ ವಿನೀಶ್ ಹಾಗೂ ಡೈರೆಕ್ಟರ್ ಪ್ರಕಾಶ್ ಜೊತೆ ಕುಳಿತಿರುವ ಫೋಟೋ ಲಭ್ಯವಾಗಿದೆ. ಕೊಲೆ ಆರೋಪದಲ್ಲಿ ಬಂಧಿತರಾಗಿದ್ದ ದರ್ಶನ್ ಪಾಸ್‌ಪೋರ್ಟ್‌ನ್ನು ಕೋರ್ಟ್ ವಶಪಡಿಸಿಕೊಂಡಿತ್ತು. ಇದೀಗ ಜಾಮೀನು ಪಡೆದುಕೊಂಡಿರುವ ದರ್ಶನ್ ಕೋರ್ಟ್‌ನಿಂದ ಅನುಮತಿ ಪಡದೇ ವಿದೇಶಕ್ಕೆ ತೆರಳುತ್ತಿದ್ದಾರೆ. ಡೆವಿಲ್ ಚಿತ್ರದ ಹಾಡೊಂದರ ಚಿತ್ರೀಕರಣಕ್ಕಾಗಿ ದರ್ಶನ್ ಥೈಲ್ಯಾಂಡ್‌ಗೆ ಹೋಗಿದ್ದು, ಈ ಮೂಲಕ ಡೆವಿಲ್ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗುತ್ತಿದೆ.
ಈ ಹಿಂದೆ ಯುರೋಪ್ ಹಾಗೂ ದುಬೈಗೆ ತೆರಳಲು ದರ್ಶನ್ ಕೋರ್ಟ್‌ನಿಂದ ಅನುಮತಿ ಕೇಳಿದ್ದವರು. ಆದರೆ ಅಲ್ಲಿ ವೀಸಾ ಹಾಗೂ ಇನ್ನಿತರ ತೊಂದರೆ ಉಂಟಾದ ಕಾರಣಕ್ಕೆ ದರ್ಶನ್ ಇದೀಗ ಭಾರತಕ್ಕೆ ವೀಸಾಫ್ರೀ ಇರುವ ಥೈಲ್ಯಾಂಡ್‌ನಲ್ಲಿ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.ಇದನ್ನೂ ಓದಿ: ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆಶಿ ಇಬ್ಬರೂ ಪಾಲಿಸುತ್ತೇವೆ – ಮತ್ತೆ ಸಿಎಂ ಸ್ಪಷ್ಟನೆ