ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

1 Min Read

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಪ್ರಕರಣದ ತನಿಖೆ ಕೊನೇ ಹಂತಕ್ಕೆ ಬಂದು ನಿಂತಿದೆ.

ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಕೆಟ್ಟ ಕಾಮೆಂಟ್‌ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಕಾಮೆಂಟ್ ಮಾಡಿ ತಲೆಮರಿಸಿಕೊಂಡಿದ್ದವರಲ್ಲಿ 6 ಮಂದಿಯನ್ನ ಪೊಲೀಸರು ಬಂಧನ ಮಾಡಿ ಜೈಲಿಗಟ್ಟಿದ್ದಾರೆ. ಜೈಲಿಗೆ ಹೋಗಿರುವ ಬಂಧಿತ ಆರೋಪಿಗಳಲ್ಲಿ ನಟ ಸುದೀಪ್ ಅಭಿಮಾನಿಗಳು (Sudeep Fans) ಸೇರಿ ಒಟ್ಟು 6 ಮಂದಿಯನ್ನ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

ಬಂಧಿತ ಆರೋಪಿಗಳಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌, ಪೆಟ್ರೋಲ್ ಬಂಕ್ ಮ್ಯಾನೇಜರ್‌ ಕೂಡ ಸೇರಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ 60 ದಿನ ಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬೇಕಿತ್ತು. ಹಾಗಾಗಿ ಬಂಧಿತರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: 200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ; ಪತ್ನಿ ಆತ್ಮಹತ್ಯೆ

Share This Article