ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ದಸರಾ ವೀಕ್ಷಣೆ ದುಬಾರಿ – ಟಿಕೆಟ್ ದರ ಭಾರೀ ಏರಿಕೆ

Public TV
1 Min Read

ಮೈಸೂರು: ಐತಿಹಾಸಿಕ ಮೈಸೂರು ದಸರಾ (Mysuru Dasara) ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ (ಬುಧವಾರ) ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು.

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಇದನ್ನೂ ಓದಿ: ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವ

ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ನವರಾತ್ರಿ 2023: ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ – ಪುರಾಣ ಕಥೆ ಏನು?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್