ಬೆಂಗಳೂರು: ಎಂಜಿನಿಯರಿಂಗ್, ಆಯುಷ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಸೂಕ್ತ ಛಾಯ್ಸ್ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ.3ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.4ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಭೂಕಂಪ – ಸಾವಿನ ಸಂಖ್ಯೆ 800ಕ್ಕೆ ಏರಿಕೆ: 2000ಕ್ಕೂ ಹೆಚ್ಚು ಜನರಿಗೆ ಗಾಯ
ಛಾಯ್ಸ್-1 ಮತ್ತು ಛಾಯ್ಸ್-2 ಆಯ್ಕೆ ಮಾಡಿದವರು ಶುಲ್ಕ ಹಾಗೂ ಛಾಯ್ಸ್-3 ಆಯ್ಕೆ ಮಾಡಿದವರು ಕಾಷನ್ ಡೆಪಾಸಿಟ್ ಪಾವತಿಗೆ ಸೆ.3 ಕೊನೆ ದಿನ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: Vote Chori | ಮೋದಿ ವಿರುದ್ಧ ರಾಹುಲ್ ಹೈಡ್ರೋಜನ್ ಬಾಂಬ್
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಮತ್ತು ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿ ಕುರಿತು ಸದ್ಯದಲ್ಲೇ ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Bengaluru Rains | ಕೆಲವೇ ನಿಮಿಷದ ಮಳೆಗೆ ಬೆಂಗಳೂರಲ್ಲಿ ಭಾರಿ ಅವಾಂತರ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು