ದತ್ತಾತ್ರೇಯ ಹೊಸಬಾಳೆ ಮನುಸ್ಮೃತಿ ವ್ಯಕ್ತಿ – ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Public TV
1 Min Read

ಬೆಂಗಳೂರು: ಆರ್‌ಎಸ್‌ಎಸ್ (RSS) ನಾಯಕ ದತ್ತಾತ್ರೇಯ ಹೊಸಬಾಳೆ (Dattatreya Hosabale) ಮನುಸ್ಮೃತಿ ವ್ಯಕ್ತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಹೊಸಬಾಳೆ ಅವರು ಮನುಸ್ಮೃತಿಯ ವ್ಯಕ್ತಿ. ಬಡವರ್ಗದ ಜನರು ಏಳಿಗೆ ಹೊಂದುವುದು ಅವರಿಗೆ ಇಷ್ಟವಿಲ್ಲ. ಸಾವಿರ ವರ್ಷಗಳಿಗೂ ಹೆಚ್ಚು ಕಾಲ ಪಾಲಿಸಿಕೊಂಡು ಬಂದಿರುವುದನ್ನು ಅವರು ಇನ್ನೂ ಮುಂದುವರಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಸಮಾಜವಾದ, ಜಾತ್ಯತೀತತೆ, ಒಕ್ಕೂಟ ವ್ಯವಸ್ಥೆ, ಸ್ವಾತಂತ್ರ‍್ಯ, ಸಮಾನತೆ ಅಥವಾ ಭ್ರಾತೃತ್ವದಲ್ಲಿ ನಂಬಿಕೆ ಇಡುವುದಿಲ್ಲ. ಎಲ್ಲಾ ಮೌಲ್ಯಗಳನ್ನು ತಿರಸ್ಕರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ರಾಯಚೂರು | ಹಾವು ಕಚ್ಚಿ ತಾಯಿ ಮಗ ಸಾವು – ಕುಟುಂಬಸ್ಥರ ಆಕ್ರಂದನ

ಇದು ಅವರ ಪಕ್ಷದ ಮಾರ್ಗ, ಆರ್‌ಎಸ್‌ಎಸ್ ಮಾರ್ಗಕ್ಕೆ ನಿಜವಾಗಿಯೂ ಬದ್ಧರಾಗಿದ್ದರೆ, ಅವರು ಅಸ್ಪೃಶ್ಯತೆಯನ್ನು ತೊಡೆದು ಹಾಕುತ್ತಿದ್ದರು ಎಂದು ಟಾಂಗ್ ಕೊಟ್ಟರು.

ಇದೇ ವೇಳೆ ಸೆಪ್ಟೆಂಬರ್ ಕ್ರಾಂತಿ, ಪೂರ್ಣಾವಧಿ ಸಿಎಂ, ನಾಯಕತ್ವ ಬದಲಾವಣೆ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರವನ್ನು ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ಈ ಮೂಲಕ ಏನೇ ನಿರ್ಧಾರ ಮಾಡುವುದಾದರೂ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ ಎಂಬ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಪಕ್ಷದ ಹೈಕಮಾಂಡ್ ಕೈಯಲ್ಲಿದೆ. ಅದು ಹೈಕಮಾಂಡ್‌ಗೆ ಬಿಟ್ಟಿದ್ದು. ಮುಂದಿನ ಕ್ರಮ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್‌ಗೆ ಇದೆ. ಆದರೆ ಯಾರೂ ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಯಾರೂ ಊಹಿಸಲು‌ ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

Share This Article