ಬೆಂಗಳೂರು: ದಾವಣಗೆರೆ ಉಪಚುನಾವಣೆ (Davanagere By Election) ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಮುಸ್ಲಿಂ ಸಮುದಾಯದ (Muslim Community) ಉಲೇಮಾಗಳು ಕಿಡಿಕಾರುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಉಲೇಮಾಗಳು(Ulema) ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಉಳಿಸಿ, ಬೆಳೆಸಿಕೊಂಡು ಬಂದಿದ್ದೇವೆ. ಆದ್ರೆ ದಾವಣಗೆರೆ ಚುನಾವಣೆಯಲ್ಲಿ ನಮ್ಮ ನಾಯಕರನ್ನು ಮೂಲೆಗೆ ಸೇರಿಸುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

ಕಾಂಗ್ರೆಸ್ ಅಧಿಕಾರಕ್ಕೆ ಬಂದು 3 ವರ್ಷವಾಗಿದೆ. ಹಿಜಾಬ್ ಸಮಸ್ಯೆ, ಮೀಸಲಾತಿ ಬಗ್ಗೆ ಏನೂ ಮಾಡಿಲ್ಲ. ಮುಸ್ಲಿಂ ಸಮುದಾಯ ಅತ್ತಾಗ ಚಾಕಲೇಟ್ ಕೊಡುವಂತೆ ಸಮಾಧಾನ ಮಾಡುತ್ತಿದ್ದಾರೆ. ಅಬ್ದುಲ್ ಜಬ್ಬಾರ್ ವಿರುದ್ಧದ ಉಚ್ಚಾಟನೆ ವಾಪಸ್ ಪಡೆದಿಲ್ಲ ಅಂದರೆ ಪಕ್ಷ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


