ಚಿಕನ್ ಸಾರು ಮಾಡಿಲ್ಲವೆಂದು ಪತ್ನಿ ಕೊಲೆಗೈದಿದ್ದ ಪತಿಗೆ 6 ವರ್ಷ ಜೈಲು

Public TV
1 Min Read

ದಾವಣಗೆರೆ: ಚಿಕನ್ ಸಾರು (Chicken) ಮಾಡಿಲ್ಲವೆಂದು ಕ್ಯಾತೆ ತೆಗೆದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿದ್ದ ಪತಿಗೆ ಇದೀಗ ನ್ಯಾಯಾಲಯ ಜೈಲು ಶಿಕ್ಷೆಯ ಜೊತೆಗೆ ದಂಡವನ್ನೂ ವಿಧಿಸಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಮಾಗನಹಳ್ಳಿ ಕೆಂಚಪ್ಪ ಶಿಕ್ಷೆಗೊಳಗಾದವ. ಸದ್ಯ ಈತನಿಗೆ ದಾವಣಗೆರೆ (Davanagere) 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 6 ವರ್ಷ ಜೈಲು (Jail) ಶಿಕ್ಷೆ ಹಾಗೂ 10,000 ದಂಡ ವಿಧಿಸಿದೆ.

ಏನಿದು ಪ್ರಕರಣ..?: 2022ರ ಜೂನ್ 8 ರಂದು ಕೆಂಚಪ್ಪ ಕಂಠಪೂರ್ತಿ ಮದ್ಯ ಸೇವಿಸಿ ಬಂದು ಚಿಕನ್ ಸಾಂಬಾರು ಮಾಡಿಲ್ಲ ಅಂತಾ ಪತ್ನಿ ಶೀಲಾರೊಂದಿಗೆ ಜಗಳವಾಡಿ ಚಾಕುವಿನಿಂದ ಎಡಭುಜಕ್ಕೆ ಚುಚ್ಚಿ ಕೊಲೆ ಮಾಡಿದ್ದ. ಈ ಸಂಬಂಧ ಶೀಲಾ ಅವರ ತಾಯಿ ಉಕ್ಕಡಗಾತ್ರಿ ಗುತ್ಯಮ್ಮ ಅವರು ಹರಿಹರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿಯ ತಂದೆ ಅನುಮಾನಾಸ್ಪದ ಸಾವು

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ತನಿಖಾಧಿಕಾರಿ ಸಿಪಿಐ ಸತೀಶ್, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ವಿಜಯಾನಂದ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರ ವಕೀಲ ಸತೀಶ್ ಕುಮಾರ್ ವಾದ ಮಂಡಿಸಿದ್ದರು.

Share This Article