ಅಹಿತಕರ ಘಟನೆ ನಡೆಯದಿರಲೆಂದು ಗಣೇಶ ಮೂರ್ತಿ ವಿಸರ್ಜನೆಯ ಟ್ರ್ಯಾಕ್ಟರ್ ಚಲಾಯಿಸಿದ ಜಿಲ್ಲಾಧಿಕಾರಿ

Public TV
1 Min Read

ದಾವಣಗೆರೆ: ಗಣಪತಿ ವಿಸರ್ಜನೆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂದು ದಾವಣಗೆರೆ ಜಿಲ್ಲಾಧಿಕಾರಿ ರಮೇಶ್ ಅವರು ಸ್ವತಃ ಗಣೇಶ ಮೂರ್ತಿಯನ್ನು ಮೆರವಣಿಗೆ ಮಾಡಲು ಸಿದ್ಧಪಡಿಸಿದ್ದ ಟ್ರ್ಯಾಕ್ಟರನ್ನು ಚಲಾಯಿಸಿದ್ದಾರೆ.

ಶ್ರೀ ವರಸಿದ್ಧಿ ವಿನಾಯಕ ಸೇವಾ ಸಮಿತಿ ವಿನೋಭನಗರದಲ್ಲಿ ಆಯೋಜಿಸಿದ್ದ ಗಣೇಶ ವಿಸರ್ಜನೆ ವೇಳೆ ನಗರದಲ್ಲಿ ಕೋಮು ಗಲಭೆ ಆಗಬಹುದೆಂಬ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿತ್ತು. ಪ್ರತಿವರ್ಷ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರವರು ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು. ಆದರೆ ಈ ವರ್ಷ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಟ್ರ್ಯಾಕ್ಟರ್ ಚಲಾಯಿಸಿದ್ದಾರೆ.

ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆದಿದ್ದು, ಈ ವೇಳೆ ಯುವಕರು ಡಿಜೆ ಏರ್ಪಡಿಸಿ ಸಖತ್ ಸ್ಟೆಪ್ ಹಾಕಿದರು. ಮೆರವಣಿಗೆ ಆರಂಭವಾದ ಸ್ಥಳದಿಂದ ಗಣೇಶ ಮೂರ್ತಿ ವಿಸರ್ಜನ ಸ್ಥಳದವರೆಗೂ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದರು. ನಗರದ ಪ್ರಮುಖ ಸ್ಥಳಗಳು ಸೇರಿದಂತೆ ಕೆಲವು ಪ್ರಮುಖ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪೊಲೀಸ್ ಮುನ್ನೆಚ್ಚರಿಕೆ ಕ್ರಮದಿಂದ ಯಾವುದೇ ಅಹಿತರಕರ ಘಟನೆ ನಡೆಯದೆ ಈ ಬಾರಿ ಗಣಪತಿ ವಿಸರ್ಜನೆ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ವತಃ ಜಿಲ್ಲಾಧಿಕಾರಿಗಳೇ ಜನರ ನಡುವೆ ಬಂದ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *