– ಮೇಟಿ ಕಿರಿಯ ಪುತ್ರ ಉಮೇಶ್ ಮೇಟಿಗೆ ಬಾಗಲಕೋಟೆ ಟಿಕೆಟ್
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ (Congress) ಟಿಕೆಟ್ ಘೋಷಿಸಿದೆ. ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ (Samarth Shamanur) ಹಾಗೂ ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ (Umesh Meti) ಕಣಕ್ಕಿಳಿಯಲಿದ್ದಾರೆ.
ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು ಈ ಬಾರಿ ಅಲ್ಪಸಂಖ್ಯಾತರಿಗೆ ನೀಡಬೇಕು ಎಂದು ಮುಸ್ಲಿಮರು ಪಟ್ಟು ಹಿಡಿದಿದ್ದರು. ಇತ್ತ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪುತ್ರ ಸಮರ್ಥ್ ಶಾಮನೂರು ಟಿಕೆಟ್ ಘೋಷಣೆಯಾಗುವುದಕ್ಕೂ ಮುಂಚೆಯೇ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮುಸುಕಿನ ಗುದ್ದಾಟ ನಡೆದಿತ್ತು. ಇದನ್ನೂ ಓದಿ: ದಾವಣಗೆರೆಯಲ್ಲಿ ಸಮರ್ಥ್ ಶಾಮನೂರಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸ್..?
ನಿನ್ನೆ ರಾತ್ರಿ ಅಲ್ಪಸಂಖ್ಯಾತ ನಾಯಕರ ಜೊತೆ ಸಿಎಂ, ಡಿಸಿಎಂ, ಸುರ್ಜೇವಾಲ ಸಭೆ ನಡೆಸಿದ್ದರು. ಸಭೆಯಲ್ಲಿ ಅಲ್ಪಸಂಖ್ಯಾತ ನಾಯಕರ ಮನವೊಲಿಕೆ ಯಶಸ್ವಿಯಾಯಿತು. ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಡಲು ಅಲ್ಪಸಂಖ್ಯಾತ ನಾಯಕರು ಒಪ್ಪಿಗೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಇತ್ತ, ಬಾಗಲಕೋಟೆ ಕ್ಷೇತ್ರದ ಟಿಕೆಟ್ ಅನ್ನು ದಿವಂಗತ ಹೆಚ್.ವೈ.ಮೇಟಿ ಅವರ ಕಿರಿಯ ಪುತ್ರ ಉಮೇಶ್ ಮೇಟಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದನ್ನೂ ಓದಿ: ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

