ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

0 Min Read

– ಮೇಟಿ ಕಿರಿಯ ಪುತ್ರ ಉಮೇಶ್‌ ಮೇಟಿಗೆ ಬಾಗಲಕೋಟೆ ಟಿಕೆಟ್‌

- Advertisement -

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ (Congress) ಟಿಕೆಟ್‌ ಘೋಷಿಸಿದೆ. ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್‌ (Samarth Shamanur) ಹಾಗೂ ಬಾಗಲಕೋಟೆ ಕ್ಷೇತ್ರದಿಂದ ಉಮೇಶ್‌ ಮೇಟಿ (Umesh Meti) ಕಣಕ್ಕಿಳಿಯಲಿದ್ದಾರೆ.

- Advertisement -

ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ ಅನ್ನು ಈ ಬಾರಿ ಅಲ್ಪಸಂಖ್ಯಾತರಿಗೆ ನೀಡಬೇಕು ಎಂದು ಮುಸ್ಲಿಮರು ಪಟ್ಟು ಹಿಡಿದಿದ್ದರು. ಇತ್ತ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ ಪುತ್ರ ಸಮರ್ಥ್‌ ಶಾಮನೂರು ಟಿಕೆಟ್‌ ಘೋಷಣೆಯಾಗುವುದಕ್ಕೂ ಮುಂಚೆಯೇ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕಾಂಗ್ರೆಸ್‌ ಟಿಕೆಟ್‌ ವಿಚಾರವಾಗಿ ಮುಸುಕಿನ ಗುದ್ದಾಟ ನಡೆದಿತ್ತು. ಇದನ್ನೂ ಓದಿ: ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

- Advertisement -

- Advertisement -

ನಿನ್ನೆ ರಾತ್ರಿ ಅಲ್ಪಸಂಖ್ಯಾತ ನಾಯಕರ ಜೊತೆ ಸಿಎಂ, ಡಿಸಿಎಂ, ಸುರ್ಜೇವಾಲ ಸಭೆ ನಡೆಸಿದ್ದರು. ಸಭೆಯಲ್ಲಿ ಅಲ್ಪಸಂಖ್ಯಾತ ನಾಯಕರ ಮನವೊಲಿಕೆ ಯಶಸ್ವಿಯಾಯಿತು. ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಡಲು ಅಲ್ಪಸಂಖ್ಯಾತ ನಾಯಕರು ಒಪ್ಪಿಗೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದೆ.

ಇತ್ತ, ಬಾಗಲಕೋಟೆ ಕ್ಷೇತ್ರದ ಟಿಕೆಟ್‌ ಅನ್ನು ದಿವಂಗತ ಹೆಚ್‌.ವೈ.ಮೇಟಿ ಅವರ ಕಿರಿಯ ಪುತ್ರ ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಇದನ್ನೂ ಓದಿ: ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Share This Article