ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

Public TV
1 Min Read

-ನಾಲ್ವರು ಎಂಜಿನಿಯರ್‌ಗಳ ಅಮಾನತು

ಗಾಂಧಿನಗರ: ಗುಜರಾತ್‌ನ (Gujarat) ವಡೋದರಾ (Vadodara) ಜಿಲ್ಲೆಯಲ್ಲಿ ನಡೆದ ಸೇತುವೆ ದುರಂತದಲ್ಲಿ (Bridge Collapse) ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆಂದು ವಡೋದರಾ ಡಿಸಿ ಅನಿಲ್ ಧಮೇಲಿಯಾ ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪಡೆಗಳು 4 ಕಿ.ಮೀ. ಕೆಳಭಾಗದವರೆಗೆ ಶೋಧಕಾರ್ಯ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಎರಡು ವಾಹನಗಳು ಕೆಸರಿನಲ್ಲಿ ಸಿಲುಕಿಕೊಂಡಿವೆ. ಆ ವಾಹನಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆಯಾಗುತ್ತಿರುವ ಕಾರಣ ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಡಿಸಿ ಹೇಳಿದ್ದಾರೆ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

ಇನ್ನೂ ಸೇತುವೆ ಮೇಲೆ ತೂಗಾಡುತ್ತಿರುವ ಟ್ರಕ್ ಕುರಿತು ಮಾತನಾಡಿ, ಅದು ಖಾಲಿ ಟ್ಯಾಂಕರ್ ಆಗಿದ್ದು, ಅದನ್ನು ಸರಿಸಿದರೆ ಮತ್ತಷ್ಟು ಸೇತುವೆ ಕುಸಿದು ಬೀಳಲಿದೆ. ಸೇತುವೆ ಕೆಳಗಡೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಟ್ಯಾಂಕರನ್ನು ಅಲ್ಲೇ ಉಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

ಘಟನೆ ಬಳಿಕ ಆರ್&ಬಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಆದೇಶ ಹೊರಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿರುವ ಎಲ್ಲಾ ಸೇತುವೆಗಳ ಸುರಕ್ಷತಾ ಪರಿಶೀಲನೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

Share This Article