ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ: ಡಿಕೆಶಿ

Public TV
1 Min Read

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮರ್ (DK Shivakumar) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಈ ದೇಶದ ಹೆಣ್ಣು ಮಕ್ಕಳು ಕರ್ನಾಟಕದ ಮಾದರಿ ನೋಡ್ತಿದ್ದಾರೆ. 500ರೂ. ಗೆ ಗ್ಯಾಸ್ ಸಿಲಿಂಡರ್ ಕೊಡಬೇಕು ಅಂತ ಹೇಳಿದ್ದೆವು. ಈಗ ನಾವು 2 ಸಾವಿರ ಕೊಡ್ತಿದ್ದೀವಿ ಎಂದರು.

ಹೆಣ್ಣು ಮಕ್ಕಳ ಅಕೌಂಟಿಗೆ ಹಣ ಹೋಗಲಿದೆ. ನೂರು ದಿನದ ಸಂಭ್ರಮ ಆಚರಿಸುತ್ತಿದ್ದೇವೆ. ನಾಡಿನ ಯಾವ ಮತದಾರ ಆಚರಣೆ ಮಾಡುತ್ತಿದ್ದಾರೆ. ನಾಡಿನ ಎಲ್ಲಾ ಹೆಣ್ಣು ಮಕ್ಕಳ ಮನೆಗೆ ಹಣ ತಲುಪುತ್ತಿದೆ. ಸಿದ್ದರಾಮಯ್ಯ, ನಾನು ಚೆಕ್‍ಗೆ ಸಹಿ ಹಾಕಿದ್ದೆವು. ರಾಹುಲ್ ಗಾಂಧಿ (Rahul Gandhi) ಹಾಗೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬರುತ್ತಿದ್ದಾರೆ. ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜನತೆಗೆ ಸಿಹಿ ಸುದ್ದಿ- ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ

12 ಲಕ್ಷಕ್ಕೂ ಹೆಚ್ಚು ಕಡೆ ಝೂಮ್ ಮೀಟಿಂಗ್ ನಡೆಯಲಿದೆ. 1.10 ಕೋಟಿ ಹೆಣ್ಣು ಮಕ್ಕಳು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ಅವರು ಉಚಿತ ಯೋಜನೆ ಇಂದ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಮಹಾರಾಷ್ಟ್ರದಲ್ಲಿ ಯಾಕೆ 1,500 ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ಕೊಡ್ತಿದ್ದಾರೆ, ನಮ್ಮಲ್ಲಿ ಯಾಕಿಲ್ಲ ಅಂತ ಎಲ್ಲೆಡೆ ಬೈಯುತ್ತಿದ್ದಾರೆ ಎಮದು ವಾಗ್ದಾಳಿ ನಡೆಸಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್