ಬಿಜೆಪಿಯವರು 543 ಕ್ಷೇತ್ರಗಳಲ್ಲೂ ಗೆಲ್ಲಲಿ – ಡಿಕೆ ಶಿವಕುಮಾರ್

Public TV
1 Min Read

ಬೆಂಗಳೂರು: ಬಿಜೆಪಿ (BJP) ಅವರು 28 ಕ್ಷೇತ್ರ ಮಾತ್ರ ಅಲ್ಲ 543 ಕ್ಷೇತ್ರವನ್ನೂ ಗೆಲ್ಲಲಿ ಅಂತ ಬಿಜೆಪಿಗೆ ಡಿಸಿಎಂ ಡಿಕೆಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ (Lok Sabha Elections) 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28 ಕ್ಷೇತ್ರ ಮಾತ್ರವಲ್ಲ ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ, ಬೇಡ ಎಂದವರು ಯಾರು? ಎಂದು ಕುಟುಕಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ನಾವು 136-140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಅಂತ ವಿಧಾನಸಭೆ ಸೋಲನ್ನ ಬಿಜೆಪಿಗೆ ನೆನಪು ಮಾಡಿದರು. ಇದನ್ನೂ ಓದಿ: Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ಮೈತ್ರಿ ಸರ್ಕಾರ ಪತನ

I.N.D.I.A ಒಕ್ಕೂಟದಿಂದ ನಿತೀಶ್ ಕುಮಾರ್ ಹೊರ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಂದೆ ಏನಾಗುತ್ತದೆ ನೋಡೋಣ. ಅಮೇಲೆ ಪ್ರತಿಕ್ರಿಯೆ ಕೊಡ್ತೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

Share This Article