ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

1 Min Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah)  ಬಜೆಟ್ ಮಂಡನೆ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar)  ನಾಳೆ ದೆಹಲಿ ಯಾತ್ರೆ ಕೈಗೊಳ್ಳಲಿದ್ದಾರೆ.

ನಾಳೆ ಡಿಕೆ ಶಿವಕುಮಾರ್‌ ಪ್ರಿಯಾಂಕ್‌ ಖರ್ಗೆ (Priyank Kharge) ಪ್ರತಿನಿಧಿಸುವ ಕಲಬುರಗಿಯ ಚಿತ್ತಾಪುರದಲ್ಲಿ(Chittapur) ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

ಉದ್ಘಾಟನೆಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಜೊತೆ ಕಲಬುರಗಿಯಿಂದ ದೆಹಲಿಗೆ ಜೊತೆಯಾಗಿ  ಪ್ರಯಾಣಿಸಲಿದ್ದಾರೆ.

ನೀರಾವರಿ ಇಲಾಖೆ ಕೆಲವು ಕೆಲಸದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೂ ಬಜೆಟ್ ಮಂಡನೆ ಬೆನ್ನಲ್ಲೇ ಎಐಸಿಸಿ‌ ಅಧ್ಯಕ್ಷರ ಜೊತೆ ಡಿಕೆಶಿ ದೆಹಲಿಗೆ ಹೋಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

Share This Article