ರಸ್ತೆ ಗುಂಡಿ ಮುಚ್ಚಲು ಸೆ.15ರ ವರೆಗೆ ಗಡುವು, ದೂರು ಬಂದ್ರೆ ಅಧಿಕಾರಿಗಳೇ ನೇರ ಹೊಣೆ – ಡಿಕೆಶಿ ವಾರ್ನಿಂಗ್

Public TV
1 Min Read

– ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗ್ತಾರೆ ಗೊತ್ತಿಲ್ಲ

ಬೆಂಗಳೂರು: ಸೆಪ್ಟೆಂಬರ್‌ 15ರ ವರೆಗೆ ಬೆಂಗಳೂರು ನಗರದ ರಸ್ತೆಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ (BBMP) ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಾರ್ನಿಂಗ್ ಮಾಡಿದ್ದಾರೆ. 

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ರೌಂಡ್ ಹಾಕುತ್ತೇನೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ನಡುವೆ ಶಾಂತಿ ಮಾತುಕತೆಗೆ ಮೋದಿ ಪ್ರಯತ್ನ; ಮಾಸ್ಕೋಗೆ ಅಜಿತ್‌ ದೋವಲ್‌

ನೀರು ನಿಲ್ಲುವ ಜಾಗಗಳ ಬಗ್ಗೆ ಗಮನ ಕೊಡಿ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಿನ್ನೆಲೆ ಎಲ್ಲಾ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಸೂಟ್ ಹೊಲಿಸಿಕೊಳ್ಳೋರ ಸಂಖ್ಯೆ ಹೆಚ್ಚಾಗಿದೆ – ಕಾಂಗ್ರೆಸ್‍ಗೆ ಬಿಜೆಪಿ ಟಾಂಗ್

ಡಿಸಿಎಂ ಅಮೆರಿಕ (America) ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ (Malleshwaram) ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಗಡುವು ನೀಡಿದ ಹಿನ್ನೆಲೆಯಲ್ಲಿ, ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಹೆಚ್ಚಾಗಿರುವ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರು ಹಾಜರಿದ್ದರು. ಇದನ್ನೂ ಓದಿ: ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಶಿವಮೊಗ್ಗ ಆಯ್ಕೆ ಮಾಡಲು ಹೆಚ್‌ಡಿಕೆಗೆ ಮನವಿ

Share This Article