ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

Public TV
1 Min Read

ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಅವರು ಸುದೀಪ್ (Sudeep) ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿ ಕಿಚ್ಚನಿಗೆ ಪತ್ರ ಬರೆದಿದ್ದಾರೆ. ಸುದೀಪ್ ತಾಯಿಯ ನಿಧನದ ಸುದ್ದಿ ಕೇಳಿ ದುಃಖವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಮನೆಯಲ್ಲಿ ನಿಷೇಧಿತ ಡ್ರಗ್ಸ್‌ ಪತ್ತೆ – ಮಲಯಾಳಂ ನಟಿ ಬಂಧನ

ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ಸರೋಜ ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಹಾಗೂ ಪ್ರೋತ್ಸಾಹವಿದೆ ಎಂದು ಸುದೀಪ್ ಹೇಳಿದ್ದರು.ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಎಂದು ಪವನ್ ಕಲ್ಯಾಣ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ 7:04ಕ್ಕೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Share This Article