ಚಿಕ್ಕಬಳ್ಳಾಪುರದ ಕೆರೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆ

Public TV
1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ (Bagepalli) ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ (Lake) ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದ್ದು, ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಮೃತ ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ ವರ್ಷದ ಮತ್ತೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ. ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

Share This Article