ತುಮಕೂರಲ್ಲಿ 19 ನವಿಲುಗಳ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
1 Min Read

– 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು: ತುಮಕೂರು (Tumakuru) ಜಿಲ್ಲೆ ಮಧುಗಿರಿ (Madhugiri) ತಾಲೂಕು ಮಿಡಿಗೇಶಿಯ (Midigeshi) ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre), ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು. ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: 1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

Share This Article