ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು

Public TV
1 Min Read

ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ (Rajath Kishan) ಅನ್ನು ಕೊಲೆ ಮಾಡುವುದಾಗಿ ಪತ್ನಿ ಅಕ್ಷಿತಾಗೆ ಕೊಲೆ ಬೆದರಿಕೆ ಸಂದೇಶ ಬಂದ ಹಿನ್ನೆಲೆ ರಜತ್ ಡಿಜಿಐಜಿಪಿಗೆ (DGIGP) ದೂರು ನೀಡಿದ್ದಾರೆ.

ಧರ್ಮಸ್ಥಳದಲ್ಲಿ (Dharmasthala) ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದ ವೇಳೆ ರಜತ್ ಕಿಶನ್ ಸ್ಥಳದಲ್ಲಿದ್ದರು. ಈ ಹಿನ್ನೆಲೆ ರಜತ್ ಪತ್ನಿ ಅಕ್ಷಿತಾಗೆ ಕೆಲವು ಕಿಡಿಗೇಡಿಗಳು ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜತ್, ನನ್ನ ಪತ್ನಿ ಅಕ್ಷಿತಾಗೆ, ಕೊಲೆ ಮಾಡ್ತೀವಿ ಅಂಥ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟದ್ದು. ನಾವು ಯಾವುದೇ ಜಾತಿ, ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ. ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ಸಾವು

ಹಾಡಹಗಲೇ ನಮ್ಮ ಕಣ್ಣಮುಂದೆನೇ ಎಲ್ಲ ನಡೆದಿದ್ದು. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ಧವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ಕರಾವಳಿ, ಮಂಡ್ಯ ಅಂತೆಲ್ಲ ಹೇಳುತ್ತಿದ್ದಾರೆ. ನಾವು ಮಂಡ್ಯದವರನ್ನ ಕರ್ಕೊಂಡು ಬರುತ್ತೇವೆ ಎಂದು ಹೇಳಿಲ್ಲ. ಬೆದರಿಕೆಗಳಿಗೆ ನಾವು ಹೆದರಲ್ಲ ಎಂದರು. ಇದನ್ನೂ ಓದಿ: ಸರ್ವಜ್ಞ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಬಂದಿದೆ, ಅಲ್ಲೂ ಪರಿಶೀಲನೆ ಮಾಡಲಿ: ಪಿ.ಸಿ ಮೋಹನ್

ಬಳಿಕ ಮಾತನಾಡಿದ ರಜತ್ ಪತ್ನಿ ಅಕ್ಷಿತಾ, ಸೋಷಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ ಮೆಸೇಜ್ ಹಾಕಿದ್ದಾರೆ. ನಿನ್ನ ಗಂಡನನ್ನ ವಾಪಸ್ ಕರೆಸಿಕೋ. ಕರಾವಳಿ ಬೇರೆ ಥರ, ಮಂಡ್ಯ ಅಲ್ಲ ಅಂತೆಲ್ಲ ಹಾಕಿದ್ದಾರೆ. ನಾವು ಹುಟ್ಟಿ ಬೆಳೆದಿದ್ದು ಮಂಡ್ಯ. ನಾವು ದೂರು ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಉದ್ವಿಗ್ನತೆ – 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರತ್ಯೇಕ FIR ದಾಖಲು

Share This Article