ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

By
2 Min Read

– ಟಿಕೆಟ್ ಆಯ್ಕೆ ಹೈಕಮಾಂಡ್‌ಗೆ ಬಿಡಲು ತೀರ್ಮಾನ

ರಾಮನಗರ: ಚನ್ನಪಟ್ಟಣ (Channapatna) ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು ಮುಂದುವರಿದಿದೆ. ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ದೋಸ್ತಿ ನಾಯಕರಲ್ಲಿ ಒಮ್ಮತದ ನಿರ್ಧಾರ ಮೂಡಿಲ್ಲ. ಹೀಗಾಗಿ ಟಿಕೆಟ್ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಡಲು ತೀರ್ಮಾನ ಮಾಡಲಾಗಿದೆ. ಹೆಚ್‌ಡಿ ಕುಮಾರಸ್ವಾಮಿ, ಆರ್ ಅಶೋಕ್, ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತ ಮೂಡಿಲ್ಲ.

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಅಂತಿಮ ನಿರ್ಣಯ ಮಾಡಲು ತೀರ್ಮಾನಿಸಲಾಗಿದೆ. ಮೈತ್ರಿ ಧರ್ಮದಂತೆ 2+1 ಸೂತ್ರಕ್ಕೆ ಜೆಡಿಎಸ್ (JDS) ಪಟ್ಟು ಹಿಡಿದಿದೆ. ಮೈತ್ರಿ ಅಭ್ಯರ್ಥಿ ಜೆಡಿಎಸ್‌ನಿಂದಲೇ ಆಯ್ಕೆ ಮಾಡಬೇಕು. ಜೆಡಿಎಸ್ ಅಭ್ಯರ್ಥಿ ಪರ ಸಿಪಿವೈ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ದಳಪತಿಗಳು ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈವರೆಗೂ ಅಭ್ಯರ್ಥಿ ಯಾರಾಗುತ್ತಾರೆ ಎಂದು ರಿವೀಲ್ ಮಾಡದ ಜೆಡಿಎಸ್ ನಾಯಕರು, ಚನ್ನಪಟ್ಟಣ ಟಿಕೆಟ್ (Channapatna By Election) ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: Kodagu| ಬಿಜೆಪಿ ಮುಖಂಡನ ಹತ್ಯೆ ಕೇಸ್‌- ಇಬ್ಬರಿಗೆ ಜೀವಾವಧಿ ಶಿಕ್ಷೆ, 10 ಸಾವಿರ ದಂಡ

ಈ ಮಧ್ಯೆ ಜೆಡಿಎಸ್‌ನಿಂದಲೇ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಆಗುತ್ತಾರೆ. ಹೆಚ್‌ಡಿಕೆ ಯಾರನ್ನಾದರೂ ನಿಲ್ಲಿಸಲಿ ಎಂದು ಹೈಕಮಾಂಡ್ ಹೇಳಿದೆ ಅಂತ ಜೆಡಿಎಸ್ ನಾಯಕ ಸುರೇಶ್ ಬಾಬು ಹೇಳಿಕೆ ನೀಡಿದ್ದಾರೆ. ಶಿಗ್ಗಾಂವಿ ಸಂಡೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

ಶಿಗ್ಗಾಂವಿ, ಸಂಡೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಶಿಗ್ಗಾಂವಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬೊಮ್ಮಾಯಿ ಸಕ್ಸಸ್ ಆಗಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ವರಿಷ್ಟರು ಆಂತರಿಕ ಸಮೀಕ್ಷೆ ನಡೆಸಿದ್ದರು. ಆಂತರಿಕ ಸಮೀಕ್ಷೆಯಲ್ಲಿ ಭರತ್ ಬೊಮ್ಮಾಯಿ ಪರ ಮತದಾರರ ಒಲವು ಇದ್ದ ಕಾರಣ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು

ಇನ್ನು ಸಂಡೂರಿನಿಂದ ಬಂಗಾರು ಹನುಮಂತುಗೆ ಟಿಕೆಟ್ ಒಲಿದಿದೆ. ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿರುವ ಬಂಗಾರು ಹನುಮಂತುಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಆಪ್ತನಿಗೆ ಟಿಕೆಟ್ ಕೊಡಿಸುವಲ್ಲಿ ಜನಾರ್ಧನರೆಡ್ಡಿ ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣ ಮಾತ್ರ ಬಿಜೆಪಿ ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

ಅತ್ತ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ತುಕಾರಾಂ ಪತ್ನಿಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ ಇದೆ. ಅನ್ನಪೂರ್ಣಗೆ ಟಿಕೆಟ್ ನೀಡಿ ನಾಳೆಯೇ ಅಧಿಕೃತ ಘೋಷಣೆ ಸಾಧ್ಯತೆ ಇದೆ. ಇದನ್ನೂ ಓದಿ: ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು?

Share This Article