ದೀಪಿಕಾ ದಾಸ್ ಮನೆಯ ಬೆಕ್ಕು ನಾಪತ್ತೆ: ಹುಡುಕಿ ಕೊಟ್ಟವರಿಗೆ ಬಂಪರ್‌ ಆಫರ್

Public TV
1 Min Read

ಬಿಗ್ ಬಾಸ್ ಸ್ಪರ್ಧಿ (Bigg Boss) ದೀಪಿಕಾ ದಾಸ್ (Deepika Das) ಮತ್ತೆ ಸುದ್ದಿಯಲ್ಲಿದ್ದಾರೆ. ನಟಿ ದೀಪಿಕಾ ಮನೆಯ ಕಪ್ಪು ಬೆಕ್ಕು ಶ್ಯಾಡೋ ಕಾಣಿಯಾಗಿದೆ. ಈ ಕುರಿತು ದೀಪಿಕಾ, ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ ದೀಪಿಕಾ ದಾಸ್ ಅವರಿಗೆ ಬೆಕ್ಕು ಮತ್ತು ಶ್ವಾನ ಎಂದರೆ ತುಂಬಾ ಇಷ್ಟ. ಅವರ ಮನೆಯಲ್ಲಿ ಪ್ರಾಣಿಗಳು ಕೂಡ ಕುಟುಂಬದ ಸದಸ್ಯರಾಗಿದ್ದಾರೆ. ಮನೆಯವರಿಗೆ ಕೊಡುವಷ್ಟೇ ಪ್ರೀತಿಯನ್ನು ಬೆಕ್ಕಿ-ಶ್ವಾನಕ್ಕೆ ಕೊಡುತ್ತಿದ್ದಾರೆ. ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದ ಶ್ಯಾಡೋ (Shadow) ಕಾಣೆಯಾಗಿದೆ.

 

View this post on Instagram

 

A post shared by Deepika Das (@deepika__das)

ದೀಪಿಕಾ ಅವರ ಮನೆಯ ಕಪ್ಪು ಬೆಕ್ಕು (Cat) ಶ್ಯಾಡೋ ಶನಿವಾರ (ಫೆ.18)ರಂದು ರಾತ್ರಿಯಿಂದ ವಿಶ್ವೇಶ್ವರಯ್ಯ ಲೇಔಟ್, 3ನೇ ಬ್ಲಾಕ್, ಉಲ್ಲಾಳು, ಬೆಂಗಳೂರಿನಲ್ಲಿ ಕಾಣೆಯಾಗಿದೆ ಎಂದು ನಟಿ ಅಳಲು ತೊಡಿಕೊಂಡಿದ್ದಾರೆ. ಈ ಕುರಿತು ಮಾಹಿತಿಯನ್ನ ನಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹುಡುಕಿ ಕೊಟ್ಟವರಿಗೆ ಬಹುಮಾನ ಕೊಡಲಾಗುವುದು ಎಂದು ತಿಳಿಸಿದ್ದಾರೆ. 10,000 ಯಿಂದ 15,000 ಸಾವಿರ ಕೊಡಲಾಗುವುದು ಎಂದು ಸೋಷಿಯಲ್‌ ಮೀಡಿಯಾ ಮೂಲಕ ನಟಿ ಮನವಿ ಮಾಡಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *