ನವದೆಹಲಿ: ದೆಹಲಿ ವಿಧಾನಸಭೆ (Delhi Assembly) ಸಂಕೀರ್ಣ ಮತ್ತು ಸ್ಪೀಕರ್ ವಿಜೇಂದರ್ ಗುಪ್ತಾ (Speaker Vijender Gupta) ಅವರ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶ ಬಂದಿದೆ.
ವಿಧಾನಸಭೆ ಸಂಕೀರ್ಣಕ್ಕೆ ಬೆಳಗ್ಗೆ 7:28ರ ಸುಮಾರಿಗೆ ಮೊದಲ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಇದರ ಜೊತೆಗೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಅಧಿಕೃತ ಇಮೇಲ್ಗೂ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಸಂದೇಶದಲ್ಲಿ ವಿಧಾನಸಭಾ ಮೆಟ್ರೋ ನಿಲ್ದಾಣದ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು
ಇದರ ಬೆನ್ನಲ್ಲೇ ವಿಧಾನಸಭೆ ಆವರಣ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದ್ದು, ದೆಹಲಿಯಾದ್ಯಂತ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಇಮೇಲ್ಗಳ ಮೂಲದ ಬಗ್ಗೆ ಭದ್ರತಾ ಸಂಸ್ಥೆಗಳು ತನಿಖೆಯನ್ನು ನಡೆಸುತ್ತಿದೆ. ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

