ನವದೆಹಲಿ: ಅರುಣ್ ಜೇಟ್ಲಿಯಲ್ಲಿ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೂ (IPL 2026) ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಸಾಹಿಲ್ ಪರಾಕ್ (Sahil Parakh) ಪ್ರಾಕ್ಟೀಸ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಂದ್ಯಾವಳಿ ಹಿನ್ನೆಲೆ ಶುಕ್ರವಾರ ಅಭ್ಯಾಸ ನಡೆಸುತ್ತಿದ್ದ ವೇಳೆ ಚೆಂಡು ಬಡಿದು ಸಾಹಿಲ್ ಪರಾಕ್ ತೀವ್ರ ಗಾಯಗೊಂಡಿದ್ದಾರೆ. ಮೈದಾನದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದ ಕಾರಣ ಅಂಬುಲೆನ್ಸ್ ಅನ್ನು ನೇರವಾಗಿ ಕ್ರೀಡಾಂಗಣಕ್ಕೆ ಕರೆಸಿಕೊಂಡು ಸಾಹಿಲ್ ಅವರನ್ನು ಸ್ಟ್ರೆಚರ್ ಮೇಲೆ ಮಲಗಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.

A young Delhi Capitals player was hit hard on the face by the ball during practice, which caused a serious injury. An ambulance was called to the ground, and he was placed on a stretcher and taken to the hospital.😢
I hope he’s okay and hasn’t suffered any serious injury.🙏 pic.twitter.com/JX8Xjl6YOW
— 𝐑𝐮𝐬𝐡𝐢𝐢𝐢⁴⁵ (@rushiii_12) April 24, 2026

ಸಾಹಿಲ್ ಅವರ ಗಾಯದ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಾವುದೇ ಮಾಹಿತಿ ನೀಡಿಲ್ಲ. ಸದ್ಯ ಸಾಹಿಲ್ ಮೈದಾನದಲ್ಲಿ ಗಾಯಗೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ಕಿಂಗ್ ಕೊಹ್ಲಿ

ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಪಂದ್ಯ ಆಡಿದ್ದು, 3ರಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲು ಕಂಡು 6 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಇಂದು ಡೆಲ್ಲಿ ತಂಡ ಪಂಜಾಬ್ ಕಿಂಗ್ಸ್‌ನೊಂದಿಗೆ ಸೆಣಸಲಿದೆ. ಇದನ್ನೂ ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

