ಏ.21ರಂದು ಕರ್ನಾಟಕಕ್ಕೆ ಕೇಜ್ರಿವಾಲ್‌ ಭೇಟಿ

Public TV
1 Min Read

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಅವರು ಗುರುವಾರ (ಏ.21) ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಗುರುವಾರ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರು, ಮಹಿಳೆಯರು, ಮತ್ತು ಯುವಕರ ಸಮಾವೇಶದಲ್ಲಿ ಕೇಜ್ರಿವಾಲ್‌ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್

ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ರಾಷ್ಟ್ರೀಯ ಹಾಗೂ ಸ್ಥಳೀಯ ಪಕ್ಷಗಳು ಈಗಾಗಲೇ ಕಸರತ್ತು ನಡೆಸುತ್ತಿವೆ. ಚುನಾವಣೆ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ದೆಹಲಿ ನಂತರ ಪಂಜಾಬ್‌ನಲ್ಲಿ ಎಎಪಿ ರೋಚಕ ಜಯ ಸಾಧಿಸಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಆಡಳಿತದಿಂದ ಬೇಸತ್ತಿದ್ದ ಪಂಜಾಬ್‌ ಜನತೆ ದೆಹಲಿ ಮಾದರಿಗೆ ಮನಸೋತು ಎಎಪಿಗೆ ಅಧಿಕಾರವನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಗೋವಾದಲ್ಲೂ ಎರಡು ಕ್ಷೇತ್ರಗಳಲ್ಲಿ ಎಎಪಿ ಜಯ ಸಾಧಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು

ಈಗಾಗಲೇ ಪ್ರಧಾನಿ ಮೋದಿ ಅವರ ತವರು ಗುಜರಾತ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಪ್ರಚಾರ ರ‍್ಯಾಲಿ ನಡೆಸಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ದೆಹಲಿ ಮಾದರಿ ಎಎಪಿ ಪ್ರಮುಖ ಚುನಾವಣಾ ಅಸ್ತ್ರವಾಗಿದೆ. ಕರ್ನಾಟಕದಲ್ಲಿ ಆಡಳಿತ ಪಕ್ಷದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಆರೋಪ ಇದ್ದು, ಇದನ್ನು ಚುನಾವಣಾ ಅಸ್ತ್ರವಾಗಿ ಕೇಜ್ರಿವಾಲ್‌ ಬಳಸಿಕೊಳ್ಳುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *