ಸ್ವಾತಿ ಮಲಿವಾಲ್ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕ್‌ ಪಕ್ಕಕ್ಕಿಟ್ಟ ಕೇಜ್ರಿವಾಲ್‌

Public TV
1 Min Read

ಲಕ್ನೋ : ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejriwal) ನಿರಾಕರಿಸಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಜೊತೆಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ನಿರಾಕರಿಸಿದ ಅವರು ತಮ್ಮ ಮುಂದಿದ್ದ ಮೈಕ್ ಅನ್ನು ಪಕ್ಕಟ್ಟಿದ್ದಾರೆ. ಇದನ್ನೂ ಓದಿ: ಸಿಎಂ ನಿವಾಸದಲ್ಲೇ ಕೇಜ್ರಿವಾಲ್‌ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್‌ ಆರೋಪ

ಅರವಿಂದ್ ಕೇಜ್ರಿವಾಲ್ ಮಾತನಾಡಲು ನಿರಾಕರಿಸುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Sing), ಮಣಿಪುರದಲ್ಲಿ ನಡೆದ ಘಟನೆಗಳನ್ನು ನೋಡಿ ಇಡೀ ದೇಶವೇ ನೋವು ಅನುಭವಿಸಿದೆ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಮೌನವಾಗಿದ್ದರು. ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದರು ಆಗಲೂ ಸುಮ್ಮನಿದ್ದರು. ನಮ್ಮ ಕುಸ್ತಿಪಟುಗಳು ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್‌ಗೆ ಪೊಲೀಸರು ಥಳಿಸಿದ್ದರು. ಈ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮೌನ ವಹಿಸಿದ್ದರು ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿಯೂ, ಕುಲದೀಪ್ ಸೆಂಗಾರ್ (2017 ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ) ಅಥವಾ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಪ್ರಧಾನಿ ಸುಮ್ಮನಿದ್ದರು. ಮೊದಲು ನಾನು ಹೇಳಿದ ಈ ಎಲ್ಲಾ ವಿಚಾರಗಳಿಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು, ಸ್ವಾತಿ ಮಲಿವಾಲ್ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಸಂಸದ ಸಂಜಯ್ ಸಿಂಗ್ ತಿರುಗೇಟು ನೀಡಿದರು.

Share This Article