ಮಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ವಿರುದ್ಧ ದೆಹಲಿ ನ್ಯಾಯಾಲಯ (Delhi Court) ತೀರ್ಪು ಸ್ವಾಗತಾರ್ಹ ಎಂದು ಮಂಜುನಾಥ ಭಂಡಾರಿ (Manjunath Bhandary) ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ (National Herald) ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ.
ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್ – ಸೋನಿಯಾ, ರಾಹುಲ್ ಗಾಂಧಿಗೆ ರಿಲೀಫ್
ಕಾಂಗ್ರೆಸ್ ಪಕ್ಷ ನ್ಯಾಯಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಸದಾ ಸತ್ಯ ಮತ್ತು ನ್ಯಾಯದ ಹಾದಿಯಲ್ಲಿ ಮುನ್ನಡೆಯಲಿದೆ ಎಂದು ಭಂಡಾರಿ ಅವರು ಪ್ರತಿಕ್ರಿಯಿಸಿದ್ದಾರೆ.

