ದೆಹಲಿಯಲ್ಲಿ ಡಬಲ್ ಮರ್ಡರ್ – ಮನೆ ಕೆಲಸದವನಿಂದಲೇ ಕೃತ್ಯ

Public TV
1 Min Read
ನವದೆಹಲಿ: ಕೆಲಸದವನಿಂದಲೇ ತಾಯಿ ಹಾಗೂ ಮಗನ ಹತ್ಯೆಗೈದಿರುವ ಘಟನೆ ದೆಹಲಿಯ (Delhi) ಲಜ್‌ಪತ್ ನಗರದಲ್ಲಿ (Lajpat Nagar) ನಡೆದಿದೆ.

ತಾಯಿ ರುಚಿಕಾ (42) ಹಾಗೂ ಮಗ ಕ್ರಿಶ್ (14) ಕೊಲೆಯಾದವರು, ಮುಖೇಶ್ (24) ಬಂಧಿತ ಆರೋಪಿ.

ರುಚಿಕಾ ಹಾಗೂ ಆಕೆಯ ಪತಿ ಸೇರಿಕೊಂಡು ಬಟ್ಟೆ ಅಂಗಡಿಯೊಂದನ್ನು ನಡೆಸುತ್ತಿದ್ದರು. ಇದೇ ಅಂಗಡಿಯಲ್ಲಿ ಆರೋಪಿ ಮುಖೇಶ್ ಚಾಲಕ ಹಾಗೂ ಸಹಾಯನಾಗಿ ಕೆಲಸ ಮಾಡುತ್ತಿದ್ದ. ಕೊಲೆ ನಡೆದ ದಿನ ಆರೋಪಿ ಮುಖೇಶ್ ಮನೆಗೆ ಬಂದಿದ್ದ. ಈ ವೇಳೆ ರುಚಿಕಾ ಆತನಿಗೆ ಬೈದಿದ್ದಳು ಎನ್ನಲಾಗಿದ್ದು, ಇದೇ ಕೋಪದಿಂದ ಆಕೆ ಹಾಗೂ ಮಗನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.ಇದನ್ನೂ ಓದಿ: ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

ಈ ಕುರಿತು ರುಚಿಕಾ ಪತಿ ಕುಲದೀಪ್ ಮಾತನಾಡಿ, ನನ್ನ ಹೆಂಡತಿ ಹಾಗೂ ಮಗನಿಗೆ ನಿರಂತರವಾಗಿ ಕರೆ ಮಾಡಿದ್ದು, ಅವರು ಉತ್ತರಿಸಿರಲಿಲ್ಲ. ಅದೇ ಗಾಬರಿಯಿಂದ ಮನೆಯ ಬಳಿ ಬಂದಾಗ ಬಾಗಿಲು ಲಾಕ್ ಆಗಿತ್ತು ಹಾಗೂ ಮೆಟ್ಟಿಲು, ನೆಲದ ಮೇಲೆ ರಕ್ತದ ಕಲೆ ಇತ್ತು. ತಕ್ಷಣವೇ ನಾನು ಪೊಲೀಸರಿಗೆ ಕರೆ ಮಾಡಿದೆ ಎಂದು ತಿಳಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 9:40ಕ್ಕೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪತ್ನಿ ರುಚಿತಾಳ ಮೃತದೇಹ ಬೆಡ್‌ರೂಮ್‌ನಲ್ಲಿ ಹಾಗೂ ಮಗನ ಮೃತದೇಹ ಬಾತ್‌ರೂಮ್‌ನಲ್ಲಿ ಪತ್ತೆಯಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಎರಡು ದೇಹಗಳ ಮೇಲೆಯೂ ಮಾರಣಾಂತಿಕ ಹಲ್ಲೆ ಇರುವುದು ಪತ್ತೆಯಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

Share This Article