ಜೂನ್ 9ರ ವರೆಗೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ED ಕಸ್ಟಡಿಗೆ

Public TV
1 Min Read

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅರೆಸ್ಟ್ ಆಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ.

ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್ ಅವರು ವಾದ ಮಂಡಿಸಿದರು. ಕೇಂದ್ರೀಯ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇದನ್ನೂ ಓದಿ: ಕರ್ನಾಟದಲ್ಲಿದ್ದಿದ್ದರೆ ನಿಮ್ಮ ಸಂತೋಷದಲ್ಲಿ ನಾನೂ ಭಾಗಿಯಾಗ್ತಿದ್ದೆ: ಮೋದಿ

ಹಿನ್ನೆಲೆ ಏನು?: ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು. 4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‌ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (CBI) ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದೀಗ ಸತ್ಯೇಂದ್ರ ಜೈನ್‌ರನ್ನು ಬಂಧಿಸಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಇಂಧನ ಕೊರತೆ – ಪರಿಹಾರಕ್ಕೆ ಸೈಕಲ್ ಸೇವೆ ಅನಾವರಣ

ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸತ್ಯೇಂದ್ರ ಜೈನ್ ಬಂಧನವಾಗಿದೆ ಎನ್ನಲಾಗಿದೆ. ಇವರು ಹಿಮಾಚಲ ಪ್ರದೇಶದ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದರು. ಸತ್ಯೇಂದ್ರ ಜೈನ್ ವಿರುದ್ಧ 8 ವರ್ಷಗಳಿಂದ ನಕಲಿ ಕೇಸ್ ಮುಂದುವರಿಯುತ್ತಿತ್ತು. ಇದುವರೆಗೆ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿ ಕ್ಲೀನ್ ಚಿಟ್ ನೀಡಿತ್ತು. ಇದೀಗ ಮತ್ತೆ ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *