ನವದೆಹಲಿ: ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ(Delhi Municipal Election Results) ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್(AAP) ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ(BJP) ಆಡಳಿತ ಅಂತ್ಯಗೊಂಡಿದೆ.
ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್ ಮಧ್ಯೆ ನೇರಾನೇರ ಸ್ಪರ್ಧೆ ಇತ್ತು. ಬಳಿಕ ಆಪ್ ಮುನ್ನಡೆಯನ್ನು ಕಾಯ್ದುಕೊಂಡಿತು.
ಆಪ್ 134, ಬಿಜೆಪಿ 104, ಕಾಂಗ್ರೆಸ್ 9, ಇತರರು 3 ವಾರ್ಡ್‌ನಲ್ಲಿ ಜಯಗಳಿಸಿದ್ದಾರೆ. ಆಪ್‌ಗೆ ತೆಕ್ಕೆಗೆ ಅಧಿಕಾರ ಬರುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: 27 ಸಾವಿರ ವಿವೋ ಫೋನ್‌ಗಳ ರಫ್ತು ತಡೆ ಹಿಡಿದ ಭಾರತ
ಚುನಾವಣೋತ್ತರ ಸಮೀಕ್ಷೆಗಳು ಆಪ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ ಭವಿಷ್ಯ ನುಡಿದಿದ್ದವು. ಬಿಜೆಪಿ ಮೂರಂಕಿ ದಾಟುವುದಿಲ್ಲ ಎಂದು ಹೇಳಿದ್ದವು. ಆದರೆ ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಆಪ್‌ಗೆ ಪ್ರಬಲ ಸ್ಪರ್ಧೆ ನೀಡಿದೆ.
2007 ರಿಂದ ಬಿಜೆಪಿ ಪಾಲಿಕೆಯ ಅಧಿಕಾರದಲ್ಲಿದೆ. ಡಿಸೆಂಬರ್ 4 ರಂದು ಚುನಾವಣೆ ನಡೆದಿದ್ದು 250 ಸ್ಥಾನಗಳಿರುವ ಪಾಲಿಕೆಯಲ್ಲಿ ಬಹುಮತಕ್ಕೆ 126 ಸ್ಥಾನಗಳ ಅಗತ್ಯವಿದೆ.