– 5 ತಿಂಗಳಲ್ಲಿ 900 ಅಕ್ರಮ ಬಾಂಗ್ಲಾ ವಲಸಿಗರು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು (Bangladeshi nationals) ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.
ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಅಕ್ರಮವಾಗಿ ವಾಸವಿದ್ದ ಬಾಂಗ್ಲಾಪ್ರಜೆಗಳನ್ನ ಬಂಧಿಸಲಾಗಿದೆ. ಈ ಪೈಕಿ 13 ಮಹಿಳೆಯರು ಮತ್ತು 12 ಪುರುಷರು ಸೇರಿದ್ದಾರೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಐಶ್ವರ್ಯ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್ – ಶಿಕ್ಷಕನಾಗಿ ಕೆಲಸ, ಲಷ್ಕರ್ ಗುಂಪಿನೊಂದಿಗೆ ಸಂಪರ್ಕ
ದೆಹಲಿಯಲ್ಲಿ ವಾಸಿಸುತ್ತಿರುವ ದಾಖಲೆ ಹೊದಿಲ್ಲದ 25 ಮಂದಿ ಬಾಂಗ್ಲಾದೇಶಿಯರನ್ನು ಬಂಧಿಸಲಾಗಿದ್ದು, ಹಿನ್ನೆಲೆ ಪರಿಶೀಲಿಸುತ್ತಿದ್ದಾರೆ. ಇದರ ಜೊತೆಗೆ ಗಡಿಪಾರು ಮಾಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ
ಬಂಧಿತರು ಐಎಂಓ ಮೊಬೈಲ್ ಅಪ್ಲಿಕೇಶನ್ ಮೂಲಕ ಬಾಂಗ್ಲಾದೇಶದಲ್ಲಿರುವ ಜನರೊಂದಿಗೆ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಈ ಅಪ್ಲಿಕೇಶನ್‌ನನ್ನು ಅಂತರರಾಷ್ಟ್ರೀಯ ಕರೆಗಳಿಗೆ ಮಾತ್ರ ಹೆಚ್ಚಾಗಿ ಬಳಸಲಾಗುತ್ತದೆ. ಕಳೆದ ಐದು ದಿನಗಳ ಹಿಂದೆ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ದಕ್ಷಿಣ ದೆಹಲಿಯ ಮಹಿಪಾಲ್ಪುರ ಪ್ರದೇಶದಿಂದ ಪೊಲೀಸರು ಬಂಧಿಸಿದ್ದರು.
5 ತಿಂಗಳಲ್ಲಿ 900 ಬಾಂಗ್ಲಾ ಪ್ರಜೆಗಳು ಪತ್ತೆ
ಜನವರಿಯಿಂದ ಮೇ ವರೆಗೆ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಸುಮಾರು 900 ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚಲಾಗಿದೆ. ದಾಖಲೆ ಪರಿಶೀಲನೆಯ ನಂತರ ಅವರನ್ನು ಗಡಿಪಾರು ಮಾಡಲಾಗುವುದು. ಪಹಲ್ಗಾಮ್ ದಾಳಿಯ ಬಳಿಕ ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆಯು ಚುರುಕಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.