ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

Public TV
1 Min Read

– ದೆಹಲಿಯ ಹಲವೆಡೆ ಭಯೋತ್ಪಾದಕ ದಾಳಿಗೆ ಪ್ಲ್ಯಾನ್‌
– ಆತ್ಮಹತ್ಯಾ ದಾಳಿಗೆ ತರಬೇತಿ ಪಡೆಯುತ್ತಿದ್ದ ಶಂಕಿತರು

ನವದೆಹಲಿ: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ (Suspected Terrorists) ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ.

ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌ ವಿಶೇಷ ಘಟಕ (Delhi Police Speical Unit) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐಸಿಸ್‌ ಮಾಡ್ಯೂಲ್‌ (ISIS Module) ಭೇದಿಸಿದ್ದು, ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬನನ್ನ ಅದ್ನಾನ್‌ ಎಂದು ಗುರುತಿಸಲಾಗಿದೆ. ಈತ ಮೂಲತಃ ಮಧ್ಯಪ್ರದೇಶದ ಭೋಪಾಲ್ ಮೂಲದವನು, ಮತ್ತೊಬ್ಬ ಶಂಕಿತನನ್ನ ದೆಹಲಿಯ ಸಾದಿಕ್ ನಗರದಲ್ಲಿ ಬಂಧಿಸಲಾಗಿದೆ. ಈ ಇಬ್ಬರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ದೆಹಲಿಯಲ್ಲಿ ಪ್ರಮುಖ ದಾಳಿ ನಡೆಸಲು ಪ್ಲ್ಯಾನ್‌ ಮಾಡುತ್ತಿದ್ದರು. ಇಬ್ಬರು ಫಿದಾಯೀನ್ (ಆತ್ಮಹತ್ಯಾ) ದಾಳಿಗಳಿಗೆ ತರಬೇತಿ ಪಡೆದಿದ್ದರು. ಸದ್ಯ ಇಬ್ಬರನ್ನ ಬಂಧಿಸಿದ್ದು, ಅವರ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಸ್ಫೋಟಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ತಾಪುರ ಆರ್‌ಎಸ್‌ಎಸ್ ಫೈಟ್‌ – ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ

ಇನ್ನೂ ಕಾರ್ಯಾಚರಣೆ ಮುಂದುವರಿಸಿರುವ ಅಧಿಕಾರಿಗಳು ಸಂಪೂರ್ಣ ಜಾಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಐಸಿಸ್‌ ಜಾಲದಲ್ಲಿ ಇನ್ನು ಎಷ್ಟು ಮಂದಿ ಇದ್ದಾರೆ? ಭಾರತದಲ್ಲಿ ಬೇರೆ ಎಲ್ಲೆಲ್ಲಿ ದಾಳಿಗೆ ಯೋಜನೆ ರೂಪಿಸಲಾಗಿದೆ? ಎಂಬೆಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಬಲಿ

Share This Article