ಗೋಡೌನ್ ಜಲಾವೃತ- ಕೇಜ್ರಿವಾಲ್ ಎಮರ್ಜೆನ್ಸಿ ಕಿಟ್ ನೀರುಪಾಲು

Public TV
1 Min Read

ನವದೆಹಲಿ: ಗೋದಾಮು ಜಲಾವೃತಗೊಂಡ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೆ ಸಿಲುಕಿದ್ದವರಿಗೆ ಕೊಡುವ ರೇಷನ್ ಕಿಟ್‍ಗಳು (Ration Kit) ನೀರುಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ.

ಹೌದು. ದೆಹಲಿಯಲ್ಲಿ ಮುಂಗಾರು ಮಳೆಯ (Mansoon Rain) ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ದೆಹಲಿಯ ಹಲವು ಭಾಗಗಳು ಜಲಾವೃತಗೊಂಡಿವೆ. ಹೀಗಾಗಿ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಪರಿಹಾರ ಕಿಟ್‍ಗಳನ್ನು ಸಿದ್ಧಪಡಿಸಿದ್ದರು. ಅಲ್ಲದೆ ಈ ಕಿಟ್‍ಗಳನ್ನು ಸರ್ಕಾರಿ ಸ್ವಾಮ್ಯದ ಗೋದಾಮಿನಲ್ಲಿ ಇರಿಸಲಾಗಿತ್ತು. ಆದರೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈ ಗೋದಾಮು ಇದೀಗ ಜಲಾವೃತಗೊಂಡಿದ್ದು, ಕಿಟ್‍ಗಳು ನಾಶವಾಗಿವೆ.

ಪ್ರವಾಹ ಸಂತ್ರಸ್ತರಿಗಾಗಿ ತಯಾರಿಸಿದ್ದ ಕಿಟ್ ಗಳನ್ನು ಜಂಗ್ಪುರದ ವಾರ್ಡ್ ಸಮಖ್ಯೆ 142 ರಲ್ಲಿ ಸಂಗ್ರಹಿಸಡಲಾಗಿತ್ತು. ಸದ್ಯ ಕಿಟ್ ಗಳು ನೀರು ಪಾಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ವಿಚಿತ್ರವಾದ್ರೂ ಸತ್ಯ- ದೇವಸ್ಥಾನದ ಹೊರಗಿದ್ದ ಚಪ್ಪಲಿ ಕದ್ದವರ ವಿರುದ್ಧ FIR

ಮಳೆಯಿಂದ ತತ್ತರಿಸಿದ ದೆಹಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಇದು ಒಬ್ಬರು ಮತ್ತೊಬ್ಬರನ್ನು ದೂಷಿಸಿ ಮಾತನಾಡುವ ಸಮಯವಲ್ಲ. ಎಲ್ಲಾ ಪ್ರವಾಹ ಪೀಡಿತ ರಾಜ್ಯಗಳ ಸರ್ಕಾರಗಳು ಪರಿಹಾರ ನೀಡಲು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಿದೆ ಎಂದು ಕರೆ ಕೊಟ್ಟರು.

ಅಲ್ಲದೆ ಜುಲೈ 8 ಮತ್ತು 9 ರಂದು ದೆಹಲಿಯಲ್ಲಿ 153 ಮಿ.ಮೀ ಮಳೆಯಾಗಿದೆ. ಈ ಮೂಲಕ ದಶಕಗಳ ದಾಖಲೆಯನ್ನು ಮುರಿದಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ 206 ಮೀಟರ್ ದಾಟಿದ ನಂತರ ನದಿ ಪಾತ್ರದ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್