ದೆಹಲಿಯಲ್ಲಿ ಬೀದಿ ನಾಯಿಗಳ ಹಾವಳಿ ಕೇಸ್‌ – ಹೊಸ ತ್ರಿಸದಸ್ಯ ಪೀಠ ರಚಿಸಿದ ಸಿಜೆಐ ಗವಾಯಿ

By
1 Min Read

ನವದೆಹಲಿ: ದೆಹಲಿಯ ಬೀದಿನಾಯಿಗಳಿಗೆ (Stray Dogs) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ನೀಡಿದ ಆದೇಶ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಮುಖ್ಯ ನ್ಯಾ. ಗವಾಯಿ ಅವರು ಎಲ್ಲಾ ಅರ್ಜಿಗಳ ವಿಚಾರಣೆಗೆ ಮೂವರು ನ್ಯಾಯಾಧೀಶರ ಹೊಸ ಪೀಠವನ್ನು ರಚಿಸಿದ್ದಾರೆ.

- Advertisement -

ಆದೇಶ ಮರುಪರಿಶೀಲನೆಗೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನು ಒಳಗೊಂಡ ಮೂವರು ನ್ಯಾಯಾಧೀಶ ಪೀಠ ರಚನೆಯಾಗಿದೆ. ಹೊಸ ಪೀಠ ಗುರುವಾರ(ಆ.14) ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ ಸುಪ್ರೀಂ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

- Advertisement -

- Advertisement -

ಸುಪ್ರೀಂ ಕೋರ್ಟ್‌ ಹೇಳಿದ್ದು ಏನು?
ದೆಹಲಿಯ ಎಲ್ಲಾ ಪ್ರದೇಶಗಳನ್ನು ಬೀದಿನಾಯಿ ಮುಕ್ತ ಮಾಡಬೇಕು, ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಮಂಗಳವಾರ ಸೂಚಿಸಿತ್ತು.

- Advertisement -

8 ವಾರಗಳ ಒಳಗೆ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಇದಕ್ಕಾಗಿ ಒಂದು ಕಾರ್ಯಪಡೆ ರಚಿಸುವ ಅಗತ್ಯವಿದ್ದರೇ ಕೂಡಲೇ ಆ ಕೆಲಸ ಮಾಡಿ. ಈ ಪ್ರಕ್ರಿಯೆಯನ್ನು ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿತ್ತು.

8 ವಾರಗಳಲ್ಲಿ ಇಡೀ ದೆಹಲಿಯನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವಂತೆ ದೆಹಲಿ ಸರ್ಕಾರ, ದೆಹಲಿ ಮಹಾನಗರ ಪಾಲಿಕೆ, ಹಾಗೂ ನವದೆಹಲಿ ಮಹಾನಗರ ಪಾಲಿಕೆಗಳಿಗೆ ಸುಪ್ರೀಂ ಆದೇಶಿಸಿತ್ತು.

Share This Article