ಬುದ್ಧಿಮಾಂದ್ಯ ಯುವತಿ ಮೇಲೆ ಗ್ಯಾಂಗ್ ರೇಪ್ – ವೀಡಿಯೋ ಮಾಡಿ ಯುವತಿಯ ಸಹೋದರನಿಗೆ ಕಳುಹಿಸಿದ ಕೀಚಕರು

Public TV
1 Min Read

ಹಾಸನ: ಬುದ್ಧಿಮಾಂದ್ಯ ಯುವತಿಯ (Demented Young Woman) ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ (Gang Rape) ಘಟನೆ ಹಾಸನದಲ್ಲಿ (Hassan) ನಡೆದಿದೆ.

ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವೀಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ವೀಡಿಯೋ ನೋಡಿದಾಗ ತನ್ನ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಇದನ್ನೂ ಓದಿ: ಭಾನುವಾರ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆ – ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ

ವೀಡಿಯೋ ಕಳುಹಿಸಿ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವೀಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

ದ್ಯ ಅತ್ಯಾಚಾರ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ (Pension Mohalla Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೋದಿ-ಟ್ರಂಪ್‌ ಫ್ರೆಂಡ್ಸ್‌, ಆದ್ರೂ ಭಾರತ-ಅಮೆರಿಕ ಮುಸುಕಿನ ಗುದ್ದಾಟ; ಯುಎಸ್‌ ಜೊತೆಗಿನ ರಾಜತಾಂತ್ರಿಕ ಸವಾಲು ಹೊಸದೇನಲ್ಲ!

Share This Article